ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನಕರ ಪೋಸ್ಟ್: ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು
ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ವಿರುದ್ಧ ವಕೀಲ ಆರ್‌ಎಲ್ಎನ್ ಮೂರ್ತಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಟ ಚೇತನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಎಂಬುವರು ದೂರು ನೀಡಿದ್ದು, ‘ನಟ ಎಂದು ಹೇಳಿಕೊಳ್ಳುವ ವಿದೇಶಿ ಪ್ರಜೆಯಾದ ಚೇತನ್ ಅವರಿಂದ ನಾಡಪ್ರಭು ಕೆಂಪೇಗೌಡರಿಗೆ ಅವಹೇಳನವಾಗಿದೆ ಎಂದು ಆರೋಪ ಮಾಡಿದ್ದಾರೆ.
ಚೇತನ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲೇನಿದೆ?
ಇಬ್ಬರು ಯೋಧರ ಕಥೆ: ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ
ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ
ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ
ಈ ರೀತಿ ನಟ ಚೇತನ್ ಅಹಿಂಸಾ ಅವರು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಇದರಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಉಂಟಾಗಿದೆ ಎಂದು ಆರೋಪಿಸಿ ವಕೀಲ ಆರ್ ಎಲ್ ಎನ್ ಮೂರ್ತಿ ಅವರು ನೀಡಿರುವ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


