ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಚಿತ್ರ 'ಫೈರ್ ಫ್ಲೈ' ನಲ್ಲಿ ಶಿವಣ್ಣ ಅತಿಥಿ ಪಾತ್ರ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಗಳು ನಿವೇದಿತಾ ಶಿವರಾಜ್‌ಕುಮಾರ್ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ನಟಿಯಾಗಿ ಅಲ್ಲ ಬದಲಿಗೆ ನಿರ್ಮಾಪಕಿಯಾಗಿ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಶ್ರೀ ಮುತ್ತು ಸಿನಿ ಸರ್ವೀಸ್ ಆರಂಭಿಸಿ ಸಿನಿಮಾಗಳನ್ನು ಮಾಡಲು ಮುಂದಾಗಿದ್ದಾರೆ.
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾವನ್ನು ವಂಶಿ ಕೃಷ್ಣ ಶ್ರೀನಿವಾಸ್ ನಿರ್ದೇಶಿಸುತ್ತಿದ್ದಾರೆ, ಮಗಳ ಚಿತ್ರದಲ್ಲಿ ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೈ ಮಿಸ್ಟೇಕ್ ಮತ್ತು ಹನಿಮೂನ್ ಕನ್ನಡ ವೆಬ್ ಸಿರೀಸ್ ನಿರ್ಮಾಣ ಮಾಡಿರುವ ನಿವೇದಿತಾ ಬಾಲ ನಟಿಯಾಗಿ ತಮ್ಮ ತಂದೆಯ ಜೊತೆ ಒಂದೆರಡು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಈ ಹಿಂದೆ PRK ಪ್ರೊಡಕ್ಷನ್ಸ್‌ನ ಮಾಯಾಬಜಾರ್‌ನಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವಂಶಿ, ಫೈರ್‌ಫ್ಲೈ ಮೂಲಕ ಚೊಚ್ಚಲ ನಿರ್ದೇಶನದ ಸಿನಿಮಾ ಮಾಡುತ್ತಿದ್ದಾರೆ. ಜೈ ರಾಮ್ ಸಹ-ನಿರ್ದೇಶಕರಾಗಿದ್ದಾರೆ. ರಘು ನಿಡುವಳ್ಳಿ ಚಿತ್ರದ ಸಂಭಾಷಣೆಗಳನ್ನು ರಚಿಸುತ್ತಿದ್ದು, ಅಭಿಲಾಷ್ ಕಲಹತ್ತಿ ಛಾಯಾಗ್ರಹಣವಿದೆ. ಚರಣ್ ರಾಜ್ ಸಂಗೀತವಿದೆ, ಇನ್ನೂ ನಟ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಹಲವು ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


