ಸಿನಿಮಾ ಸುದ್ದಿ

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಮೆದುಳಿನ ರಕ್ತಸ್ರಾವದಿಂದ(Brain Hemorrhage) ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಹೇಮಾ ಚೌಧರಿ
Published On :

ಬೆಂಗಳೂರು: ಮೆದುಳಿನ ರಕ್ತಸ್ರಾವದಿಂದ(Brain Hemorrhage) ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ(Hema Chaudhary) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. 

ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪುಣ್ಯತಿಥಿ ಮೊನ್ನೆ 18ರಂದು ಅವರ ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನೆರವೇರಿತ್ತು. ಅದಕ್ಕೆ ಹೇಮಾ ಚೌಧರಿಯವರು ಬಂದಿದ್ದರು. ಅದಾದ ನಂತರ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯ ಉಂಟಾಗಿದೆ.  

ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್‌, ಕಮಲ್ ಹಾಸನ್, ಚಿರಂಜೀವಿ, ಮೋಹನ್ ಬಾಬು, ಮಲಯಾಳಂ ಸೂಪರ್ ಸ್ಟಾರ್ ಪ್ರೇಮ್ ನಜೀರ್, ಅನಂತ್ ನಾಗ್, ಶಂಕರ್ ನಾಗ್, ರವಿಚಂದ್ರನ್ ಹೀಗೆ ಅನೇಕ ನಟರ ಜತೆ ಹೇಮಾ ಚೌಧರಿ ತೆರೆ ಹಂಚಿಕೊಂಡಿದ್ದರು. 2011ರಲ್ಲಿ ಕನ್ನಡ ಕಿರುತೆರೆಗೆ ಜನಪ್ರಿಯ ಧಾರವಾಹಿ 'ಅಮೃತವರ್ಷಿಣಿ'ಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿ ಜನರ ಮನಸೂರೆಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.