ವಿಜಯ್ ಕಾಂತ್ ಅಂತ್ಯಸಂಸ್ಕಾರದ ವೇಳೆ ನಟ ವಿಜಯ್ ಮೇಲೆ ಚಪ್ಪಲಿ ಎಸೆತ, ವಿಡಿಯೋ ವೈರಲ್
ಇತ್ತೀಚೆಗೆ ಸಾವನ್ನಪ್ಪಿದ ನಟ ವಿಜಯ್ ಕಾಂತ್ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ನಟ ವಿಜಯ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ.

ಚೆನ್ನೈ: ಇತ್ತೀಚೆಗೆ ಸಾವನ್ನಪ್ಪಿದ ನಟ ವಿಜಯ್ ಕಾಂತ್ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ನಟ ವಿಜಯ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ.
ನಟ, ರಾಜಕಾರಣಿ ಮತ್ತು ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ್ ನಿಧನರಾದ ಬೆನ್ನಲ್ಲೇ ಡಿಎಂಡಿಕೆ ಮುಖ್ಯಸ್ಥರ ನಿವಾಸಕ್ಕೆ ಹಲವು ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ನಟ ದಳಪತಿ ವಿಜಯ್ ಕೂಡ ಕ್ಯಾಪ್ಟನ್‌ಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದರು. ಈ ವೇಳೆ ಕಿಡಿಗೇಡಿಯೊಬ್ಬ ಅವರ ಮೇಲೆ ಚಪ್ಪಲಿ ಎಸೆದಿದ್ದು, ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ವ್ಯಾಪಕ ವೈರಲ್ ಆಗಿದೆ.
ಹಿಂದಿರುಗುತ್ತಿದ್ದ ವೇಳೆ ಘಟನೆ
ಕ್ಯಾಪ್ಟನ್ ವಿಜಯಕಾಂತ್ ಅವರ ಅಂತಿಮ ದರ್ಶನ ಪಡೆಯಲು ನಟ ವಿಜಯ್ ಅವರು ಬಂದಿದ್ದರು. ಈ ವೇಳೆ ಭಾವುಕರಾದ ವಿಜಯ್ ಅವರು ವಿಜಯಕಾಂತ್ ಅವರ ಕುಟುಂಬದೊಂದಿಗೆ ಕೆಲ ಕ್ಷಣಗಳನ್ನು ಕಳೆದರು. ನಂತರ ಅಗಲಿದ ನಾಯಕನ ದರ್ಶನ ಪಡೆದರು. ದರ್ಶನ ಪಡೆದು ಮನೆಗೆ ಹಿಂತಿರುಗುತ್ತಿದ್ದ ವೇಲೆ ಮಾಧ್ಯಮದವರು ಅವರನ್ನು ಮಾತನಾಡಿಸಲು ಸುತ್ತುವರೆದರು, ಪೊಲೀಸರು ಮತ್ತು ಅವರ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕರೆದುಕೊಂಡು ಹೋಗಲು ಶತ ಪ್ರಯತ್ನಗಳನ್ನು ನಡೆಸಿದರು. ಈ ವೇಳೆ ಅವರ ಮೇಲೆ ಚಪ್ಪಲಿ ಎಸೆಯಲಾಯಿತು.
ಅಭಿಮಾನಿಗಳ ಆಕ್ರೋಶ
ಈ ಘಟನೆಯಿಂದ ವಿಜಯ್ ಅಭಿಮಾನಿಗಳು ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ವಿಜಯಕಾಂತ್ ಅವರ ಸಾವಿನ ನಡುವೆ ಈ ರೀತಿಯ ವರ್ತನೆ ಸರಿಯಲ್ಲ ಎಂದು ದಳಪತಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ ಅಲ್ಲದೆ, ತಪ್ಪಿತಸ್ಥರನ್ನು ಗುರುತಿಸಿ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


