ಡಾಲಿ ಧನಂಜಯ್ ಅಭಿನಯದ 'ಹೊಯ್ಸಳ' ಟೀಸರ್ ಬಿಡುಗಡೆ
ನಟ ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, ‘ಹೊಯ್ಸಳ’ ಟೀಸರ್ ಇಂದು ಬಿಡುಗಡೆಯಾಗಿದೆ.

ಬೆಂಗಳೂರು: ನಟ ಡಾಲಿ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, ‘ಹೊಯ್ಸಳ’ ಟೀಸರ್ ಇಂದು ಬಿಡುಗಡೆಯಾಗಿದೆ.
ಸ್ಯಾಂಡಲ್ ವುಡ್ ರಫ್ ಅಂಡ್ ಟಫ್ ಪೊಲೀಸ್ ಹೀರೋಗಳ ಸಾಲಿಗೆ ಇದೀಗ ಡಾಲಿ ಸೇರ್ಪಡೆಯಾಗಿದ್ದು, ಹೊಯ್ಸಳ ಚಿತ್ರದಲ್ಲಿ ಖಡಕ್ ಪೊಲೀಸ್ ಪಾತ್ರವನ್ನು ನಟ ಧನಂಜಯ ನಿರ್ವಹಿಸಿದ್ದಾರೆ.
ಈ ಹಿಂದೆ ಸಾಕಷ್ಟು ರಫ್ ಅಂಡ್ ಟಫ್ ಪೊಲೀಸ್ ಅಧಿಕಾರಿಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ನಟ ಕಿಚ್ಚ ಸುದೀಪ, ತೆಲುಗು ನಟ ಅದಿವಿ ಶೇಷ್, ಮಲಯಾಳದ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಧನಂಜಯ್ ರನ್ನು ಹಾರೈಸಿದರು.
ಚಿತ್ರವು ಇದೇ ಮಾರ್ಚ್.30ರಂದು ಬಿಡುಗಡೆಯಾಗಲಿದ್ದು ಇದು ಡಾಲಿ ಧನಂಜಯ್ ರ 25ನೇ ಚಿತ್ರವಾಗಿದೆ. ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಚಿತ್ರ ನಿರ್ಮಾಣ ಮಾಡಿದ್ದು, ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರು ಚಿತ್ರವನ್ನು ನಿರ್ಮಿಸಿದ್ದಾರೆ. ವಿಜಯ್.ಎನ್ ರವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ.
ಸಂಕಲನ ದೀಪು ಎಸ್ ಕುಮಾರ್, ಸಂಭಾಷಣೆ ಮಾಸ್ತಿ ಅವರದು. ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


