ವರದಕ್ಷಿಣಿ ಕಿರುಕುಳ ಪ್ರಕರಣ: ನಟಿ ಅಭಿನಯ ಬಂಧನಕ್ಕಾಗಿ ಲುಕ್ ಔಟ್ ನೋಟಿಸ್
ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.

ಬೆಂಗಳೂರು: ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯ ಅವರ ಬಂಧನಕ್ಕಾಗಿ ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಜೈಲು ಶಿಕ್ಷೆ ಪ್ರಕಟ ಬಳಿಕ ತಲೆ ಮರೆಸಿಕೊಂಡಿರುವ ಅಭಿನಯ ಹಾಗೂ ಅವರ ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.
ಅಭಿನಯ ಅವರ ಅತ್ತಿಗೆ ಲಕ್ಷ್ಮೀದೇವಿ ಅವರು ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ಅಭಿನಯ ಅವರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ, ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ , ಅಭಿನಯ ಅವರ ತಾಯಿ ಜಯಮ್ಮಗೆ 5 ವರ್ಷ, ಅಭಿನಯ ಹಾಗೂ ಅವರ ಸಹೋದರ ಚೆಲುವರಾಜ್ಗೆ 2 ವರ್ಷ ಶಿಕ್ಷೆ ನೀಡಲಾಗಿತ್ತು.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಬೇಕಿತ್ತು. ಆದರೆ ಆರೋಪಿಗಳು ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ನಟಿ ಅಭಿನಯ 1983ರಲ್ಲಿ ಖ್ಯಾತ ನಿರ್ದೇಶಕ ಕಾಶಿನಾಥ್ ಅವರ ಸೂಪರ್ ಹಿಟ್ ಚಿತ್ರ `ಅನುಭವ' ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಕೆಲ ಕಾಲ ಚಿತ್ರರಂಗದಿಂದ ದೂರವಾಗಿದ್ದ ಇವರು, ಮತ್ತೆ ಹಿಟ್ಲರ್ ಕಲ್ಯಾಣ ಮತ್ತಿತರ ಜನಪ್ರಿಯ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದರು. ಇದೀಗ ಮತ್ತೆ ಧಾರವಾಹಿಯಿಂದಲೂ ಔಟ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


