ರಿಷಬ್ ಶೆಟ್ಟಿ ಮುಡಿಗೆ ಮತ್ತೊಂದು ಗರಿ: ಪ್ರತಿಷ್ಠಿತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿಗೆ ಭಾಜನರಾದ ಕಾಂತಾರ ನಟ
ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.

ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ.
ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ಮುಂಬೈನಲ್ಲಿ ಫೆ 20ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್ ಶೆಟ್ಟಿ ತಾಜ್ ಲ್ಯಾಂಡ್ ಎಂಡ್ ಹೋಟೆಲ್ ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.
ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಇದೀಗ ಈ ಅತ್ಯುನ್ನತ ಗೌರವಕ್ಕೆ ರಿಷಬ್ ಶೆಟ್ಟಿ ಪಾತ್ರರಾಗಿದ್ದು, ನಿಜಕ್ಕೂ ಸಂತಸದ ವಿಚಾರ. ʻಅತ್ಯಂತ ಭರವಸೆಯ ನಟʼ ವಿಭಾಗದಲ್ಲಿ ರಿಷಬ್ ಶೆಟ್ಟಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


