ಸುದೀಪ್ ಸಿನಿಮಾ ಕ್ಷೇತ್ರದಲ್ಲಿ ತಮ್ಮದೆ ಆದ ಸಾಧನೆ ಮಾಡಿದ್ದಾರೆ, ಆದರೆ... ಕಿಚ್ಚನ ರಾಜಕೀಯ ಪ್ರವೇಶದ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ!
ಇತ್ತೀಚೆಗೆ ಸುದೀಪ್ ಅವರನ್ನು ಭೇಟಿ ಮಾಡಿದ್ದೆ, ಕೆಲ ಕಾರ್ಯಕ್ರಮಗಳ ಇನ್ವಿಟೇಷನ್ ನೀಡಬೇಕಿತ್ತು, ಕೆಲ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ವೇಳೆ ನಾನು ನನ್ನ 35 ವರ್ಷಗಳ ರಾಜಕೀಯ ಅನುಭವದ ಜ್ಞಾನ ಭಂಡಾರವನ್ನು ಹಂಚಿಕೊಂಡಿದ್ದೇನೆ,

ಮೈಸೂರು: ಸಿನಿ ಕ್ಷೇತ್ರದಲ್ಲಿ ಮಿಂಚಿದವರು ರಾಜಕೀಯಕ್ಕೆ ಎಂಟ್ರಿ ಕೊಡುವುದನ್ನು ನಾವು ನೋಡಿದ್ದೇವೆ. ನಟ ಕಮಲ ಹಾಸನ್, ಚಿರಂಜೀವಿ, ಜಗ್ಗೇಶ್, ನಟಿ ರಮ್ಯಾ ಸೇರಿ ಅನೇಕರು ಆ ಸಾಲಿನಲ್ಲಿದ್ದಾರೆ. ಇದೀಗ ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಕೂಡ ಅದೇ ಸಾಲಿಗೆ ಸೇರಿಕೊಳ್ಳುತ್ತಾರಾ ಎನ್ನುವ ಚರ್ಚೆಗಳು ಆರಂಭವಾಗಿವೆ.
ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ ಬಗ್ಗೆ ಅರಿವಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಸುದೀಪ್ ಅವರನ್ನು ಭೇಟಿ ಮಾಡಿದ್ದೆ, ಕೆಲ ಕಾರ್ಯಕ್ರಮಗಳ ಇನ್ವಿಟೇಷನ್ ನೀಡಬೇಕಿತ್ತು, ಕೆಲ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ವೇಳೆ ನಾನು ನನ್ನ 35 ವರ್ಷಗಳ ರಾಜಕೀಯ ಅನುಭವದ ಜ್ಞಾನ ಭಂಡಾರವನ್ನು ಹಂಚಿಕೊಂಡಿದ್ದೇನೆ, ಅವರನ್ನು ಬಲವಂತ ಮಾಡುವಂತದ್ದು ಏನು ಇಲ್ಲ, ಕೆಲವು ಪ್ರಶ್ನೆಗಳನ್ನು ಕೇಳಿದ್ದೇವೆ ಎಂದಿದ್ದಾರೆ.
ನಟ ಸುದೀಪ್ ನನ್ನ ಸ್ನೇಹಿತ. ಮನೆಗೆ ಬಂದಾಗ ರಾಜ್ಯ ರಾಜಕಾರಣದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅವರು ಕೇಳಿದ ಪ್ರಶ್ನೆಗಳಿಗೆ ನನ್ನ ರಾಜಕೀಯ ಅನುಭವದ ಆಧಾರದ ಮೇಲೆ ಉತ್ತರ ನೀಡಿದ್ದೇನೆ. ಅವರನ್ನು ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


