ಸಿನಿಮಾ ಸುದ್ದಿ

ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ಸುಬಿ ಸುರೇಶ್‌ ನಿಧನ: 41ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ನಿರೂಪಕಿ

ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಕಿರುತೆರೆ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್‌ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು.

ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ಸುಬಿ ಸುರೇಶ್‌ ನಿಧನ: 41ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ನಿರೂಪಕಿ
ಸುಬಿ ಸುರೇಶ್
Published On :

ಕೊಚ್ಚಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಕಿರುತೆರೆ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್‌ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು.

ಅವರು ದೀರ್ಘ ಕಾಲದಿಂದ ಯಕೃತ್‌ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಸುಬಿ ಸುರೇಶ್‌ ಕಳೆದ ಕೆಲ ಸಮಯದಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.

ಡ್ಯಾನ್ಸರ್‌ ಹಾಗೂ ಕಾಮಿಡಿಯನ್‌ ಆಗಿ ಕೆರಿಯರ್‌ ಆರಂಭಿಸಿದ ಸುಬಿ ಸುರೇಶ್‌, ‘ಮೇಡ್ ಫಾರ್ ಈಚ್ ಅದರ್’ ಹಾಗೂ ʼಕುಟ್ಟಿ ಪಟ್ಟಾಳಂʼ ಎಂಬ ಮಕ್ಕಳ ಕಾರ್ಯಕ್ರಮದ ನಿರೂಪಕಿಯಾಗಿ ಖ್ಯಾತಿಯನ್ನು ಪಡೆದುಕೊಂಡಿದ್ದರು. ‘ಗೃಹನಾಥನ್’, ‘ತಸ್ಕರ ಲಹಲಾ’, ‘ಎಲ್ಸಮ್ಮ ಎನ್ನ ಅಂಕುಟ್ಟಿ’, ʼಡ್ರಾಮಾʼ,ʼಕಾರ್ಯಸ್ಥಾನ್‌ʼ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.