ಚೊಚ್ಚಲ ಸಿನಿಮಾ ರಿಲೀಸ್ ಆಗುವ ಮುನ್ನವೇ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ನಿಧನ
ಮಲಯಾಳಂನ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ಕೊನೆಯುಸಿರೆಳೆದಿದ್ದಾರೆ. ತನ್ನ ಚೊಚ್ಚಲ ನಿರ್ದೇಶನದ ಸಿನಿಮಾ ರಿಲೀಸ್ಗೂ ಮುನ್ನವೇ ಜೋಸೆಫ್ ನಿಧನ ಹೊಂದಿದ್ದಾರೆ.

ಮಲಯಾಳಂನ ಯುವ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ಕೊನೆಯುಸಿರೆಳೆದಿದ್ದಾರೆ. ತನ್ನ ಚೊಚ್ಚಲ ನಿರ್ದೇಶನದ ಸಿನಿಮಾ ರಿಲೀಸ್ಗೂ ಮುನ್ನವೇ ಜೋಸೆಫ್ ನಿಧನ ಹೊಂದಿದ್ದಾರೆ.
31 ವರ್ಷದ ಜೋಸೆಫ್ ಮನು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ನ್ಯುಮೋನಿಯಾ ಕಾರಣ ಕೇರಳದ ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜೋಸೆಫ್ ನಿರ್ದೇಶನದ ಮೊದಲ ಸಿನಿಮಾ ನ್ಯಾನ್ಸಿ ರಾಣಿ ಚಿತ್ರೀಕರಣ ಮುಗಿಸಿ ರಿಲೀಸ್ಗೆ ಎದುರು ನೋಡುತ್ತಿದ್ದರು. ಈ ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಜೋಸೆಫ್ ಮನು ಅವರ ಅಂತ್ಯಕ್ರಿಯೆ ಭಾನುವಾರ ಕುರವಿಲಂಗಾಡ್ ನ ಮೇಜರ್ ಆರ್ಕಿಪಿಸ್ಕೋಪಲ್ ಮಾರ್ತ್ ಮರಿಯಮ್ ಆರ್ಚ್ಡೀಕನ್ ಚರ್ಚ್ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಚೊಚ್ಚಲ ನಿರ್ದೇಶನದ ಚಿತ್ರ ‘ನ್ಯಾನ್ಸಿ ರಾಣಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅಹಾನಾ ಕೃಷ್ಣ ಮತ್ತು ಅರ್ಜುನ್ ಅಶೋಕನ್ ಈ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿದ್ದರು.
ನಟಿ ಅಹಾನಾ ತನ್ನ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ, “ರೆಸ್ಟ್ ಇನ್ ಪೀಸ್ ಮನು! ಇದು ನಿಮಗೆ ಸಂಭವಿಸಬಾರದಿತ್ತು!” ಎಂದು ಬರೆದುಕೊಂಡಿದ್ದಾರೆ. ಅಜು ವರ್ಗೀಸ್ ಅವರು ಸಂತಾಪ ಸೂಚಿಸಿ, “ತುಂಬಾ ಬೇಗ ಹೋದ ಸಹೋದರ” ಎಂದು ಬರೆದಿದ್ದಾರೆ.
ಜೋಸೆಫ್ ಮನು ಅವರು ಬಾಲನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. 2004ರಲ್ಲಿ ಅವರು ನಟಿಸಿದ ಮೊದಲ ಚಿತ್ರ ಬಿಡುಗಡೆಯಾಗಿತ್ತು. ಅವರು ಮಲಯಾಳಂ, ಕನ್ನಡ ಮತ್ತು ಹಿಂದಿ ಚಿತ್ರಗಳಲ್ಲೂ ಅಸಿಸ್ಟೆಂಟ್ ಮತ್ತು ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


