ಸಿನಿಮಾ ಸುದ್ದಿ

ರಾಕಿಬಾಯ್ 37ನೇ ಹುಟ್ಟುಹಬ್ಬ: ಕೆವಿಎನ್ ಪ್ರೊಡಕ್ಷನ್ ಜೊತೆ ಯಶ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರ, ಪುಷ್ಠಿ ನೀಡುತ್ತಿದೆ ಈ ಫೋಟೋ!

ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ.

ರಾಕಿಬಾಯ್ 37ನೇ ಹುಟ್ಟುಹಬ್ಬ: ಕೆವಿಎನ್ ಪ್ರೊಡಕ್ಷನ್ ಜೊತೆ ಯಶ್ ಮುಂದಿನ ಪ್ಯಾನ್ ಇಂಡಿಯಾ ಚಿತ್ರ, ಪುಷ್ಠಿ ನೀಡುತ್ತಿದೆ ಈ ಫೋಟೋ!
ನಿರ್ಮಾಪಕ ವೆಂಕಟ್ ಕೋಣಂಕಿ ನಾರಾಯಣ ಜೊತೆ ಯಶ್
Published On :

ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ.

ಅವರ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ದಿನ ಹೊಸ ಚಿತ್ರದ ಘೋಷಣೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು, ಸೋಷಿಯಲ್ ಮೀಡಿಯಾದಲ್ಲಿ Yash19 ಹ್ಯಾಶ್ ಟಾಗ್ ಟ್ರೆಂಡಿಯಾಗಿದೆ. ಆದರೆ ನಾನು ದೊಡ್ಡದಾದ ಪ್ರಾಜೆಕ್ಟ್ ತಯಾರಿಯಲ್ಲಿ ಪ್ರಾಮಾಣಿಕತೆಯಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯಿರಿ, ಹೇಳುತ್ತೇನೆ ಎಂದು ಅಭಿಮಾನಿಗಳಿಗೆ ಪತ್ರ ಬರೆದು ಪತ್ನಿ, ಮಕ್ಕಳೊಂದಿಗೆ ಬರ್ತ್ ಡೇ ಸೆಲೆಬ್ರೇಷನ್ ಗೆ ದುಬೈಗೆ ಹಾರಿದ್ದಾರೆ ಯಶ್.

ಅಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಕುಟುಂಬಸ್ಥರೊಂದಿಗೆ, ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿರುವ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಸಂಭ್ರಮಿಸುತ್ತಿದ್ದಾರೆ. ದುಬೈಯ ಫೋಟೋಗಳು ವೈರಲ್ ಆಗಿವೆ.

ಈ ನಡುವೆ ನಿರ್ಮಾಪಕ ವೆಂಕಟ್ ಕೋಣಂಕಿ ನಾರಾಯಣ ಜೊತೆ ಯಶ್ ತೆಗೆಸಿಕೊಂಡಿರುವ ಫೋಟೋ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಸಿನೆಮಾ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಯಶ್ ಅವರು ಮುಂದಿನ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಾಡುತ್ತಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ. ಅದಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. 

ಯಶ್ ಅವರ 37ನೇ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಈ ಫೋಟೋ ಒಂದು ಸಿಹಿ ಉಡುಗೊರೆ ಎನ್ನಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.