ಕೋಮಲ್ ಕುಮಾರ್ 'ಕಾಲಾಯ ನಮಃ' ಚಿತ್ರದಲ್ಲಿ ನಟ ಪ್ರಕಾಶ್ ರೈ
ಪವನ್ ಒಡೆಯರ್ ಅವರ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕನಾಗಿ ಹೊರಹೊಮ್ಮಿದ ಹಾಸ್ಯನಟ ನಟ ಕೋಮಲ್ ಕುಮಾರ್ ಐದು ವರ್ಷಗಳ ನಂತರ ಕಾಲಾಯ ನಮಃ ಚಿತ್ರದ ನಾಯಕನಾಗಿ ನಟಿಸಲು ಮರಳುತ್ತಿದ್ದಾರೆ.

ಪವನ್ ಒಡೆಯರ್ ಅವರ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕನಾಗಿ ಹೊರಹೊಮ್ಮಿದ ಹಾಸ್ಯನಟ ನಟ ಕೋಮಲ್ ಕುಮಾರ್ ಐದು ವರ್ಷಗಳ ನಂತರ ಕಾಲಾಯ ನಮಃ ಚಿತ್ರದ ನಾಯಕನಾಗಿ ನಟಿಸಲು ಮರಳುತ್ತಿದ್ದಾರೆ.
ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡದಿಂದ ಹೊಸ ಅಪ್ ಡೇಟ್ ಹೊರ ಬಿದ್ದಿದ್ದು, ಬಹುಭಾಷಾ ನಟ ಪ್ರಕಾಶ್ ರೈ ಕೋಮಲ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಖುಷಿ ವಿಚಾರವನ್ನು ಹಂಚಿಕೊಂಡಿದೆ.
ತಮ್ಮ ನಟನೆಯ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ " ಕಾಲಾಯಾ ನಮಃ" ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಮತಿವಣನ್ ಆಕ್ಷನ್ ಕಟ್ ಹೇಳಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ. ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಕೋಮಲ್ ಕುಮಾರ್, ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್ ಚಿತ್ರರಂಗದಿಂದ ದೂರವಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


