ಸಿನಿಮಾ ಸುದ್ದಿ

ದಳಪತಿ ವಿಜಯ್‌ 67ನೇ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್‌ ಶೆಟ್ಟಿ?

ಸಾಂಡಲ್‌ವುಡ್‌ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ತಮಿಳಿನ ಸೂಪರ್‌ಸ್ಟಾರ್‌ ದಳಪತಿ ವಿಜಯ್‌ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್‌ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ದಳಪತಿ ವಿಜಯ್‌ 67ನೇ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್‌ ಶೆಟ್ಟಿ?
ರಕ್ಷಿತ್ ಶೆಟ್ಟಿ ಮತ್ತು ವಿಜಯ್
Published On :

ಸಾಂಡಲ್‌ವುಡ್‌ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ತಮಿಳಿನ ಸೂಪರ್‌ಸ್ಟಾರ್‌ ದಳಪತಿ ವಿಜಯ್‌ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್‌ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ವರ್ಷದ ಅವರ 'ಚಾರ್ಲಿ 777' ದೇಶಾದ್ಯಂತ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿತು.

ಬಾಕ್ಸ್‌ ಆಫೀಸ್‌ನಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿ ಸೂಪರ್‌ ಹಿಟ್‌ ಪಟ್ಟಿಗೆ ಸೇರಿತು. ಈ ಸಿನಿಮಾ ಹಿಟ್‌ ಆಗಿದ್ದೇ ತಡ, ಮುಂದಿನ ಪ್ರಾಜೆಕ್ಟ್‌ಗಳ ಮೇಲೆ ಹೆಚ್ಚು ಗಮನಹರಿಸಿರುವ ರಕ್ಷಿತ್‌, ಹಲವು ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ನಿರ್ದೇಶನದ ಕೆಲಸಗಳಲ್ಲಿಯೂ ಬಿಜಿಯಾಗಿದ್ದಾರೆ.

ಅಚ್ಚರಿಯ ವಿಚಾರ ಏನೆಂದರೆ, ಕನ್ನಡದ ಜತೆಗೆ ಪರಭಾಷೆಯ ಸಿನಿಮಾ ಆಫರ್‌ಗಳೂ ಅವರನ್ನು ಅರಸಿ ಬರುತ್ತಿವೆ. ತಮಿಳಿನ ಸೂಪರ್‌ಸ್ಟಾರ್‌ ದಳಪತಿ ವಿಜಯ್‌ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್‌ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕಾಲಿವುಡ್‌ ಅಂಗಳದಲ್ಲಿ ಈ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ರಕ್ಷಿತ್‌ ಶೆಟ್ಟಿ ಜತೆಗೆ ಈಗಾಗಲೇ ಚಿತ್ರತಂಡ ಮಾತುಕತೆ ನಡೆಸಿದೆಯಂತೆ.

ಲೋಕೇಶ್ ಕನಕರಾಜ್ ತಮಿಳಿನ ಸ್ಟಾರ್ ಡೈರೆಕ್ಟರ್. ಈಗಾಗಲೇ 'ಖೈದಿ', 'ಮಾಸ್ಟರ್', 'ವಿಕ್ರಮ್' ಸಿನಿಮಾಗಳ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ. ಈಗ ಇದೇ ನಿರ್ದೇಶಕ ಮತ್ತೆ ವಿಜಯ್‌ ಜತೆ ಕೈ ಜೋಡಿಸಿದ್ದು, ಬೇರೆ ಬೇರೆ ಇಂಡಸ್ಟ್ರಿಯ ಕಲಾವಿದರೂ ಈ ಸಿನಿಮಾದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಿತ್ ಶೆಟ್ಟಿ, ಆ ತರಹದ ಯಾವುದೇ ಪ್ರಾಜೆಕ್ಟ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.