ಸಿನಿಮಾ ಸುದ್ದಿ

ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಮುಂದೆ ನಟಿ ಪ್ರೇಮಾ ಪ್ರಾರ್ಥನೆ?

90ರ ದಶಕದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಮೆರೆದ ಕೊಡಗಿನ ಕುವರಿ ನಟಿ ಪ್ರೇಮಾ ಅವರಿಗೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕರಾವಳಿ ಜಿಲ್ಲೆಯ ಕೊರಗಜ್ಜ ದೈವದ ಮೊರೆ ಹೋಗಿರುವ ವಿಡಿಯೊವದು.

ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಮುಂದೆ ನಟಿ ಪ್ರೇಮಾ ಪ್ರಾರ್ಥನೆ?
ನಟಿ ಪ್ರೇಮಾ ಸಂಗ್ರಹ ಚಿತ್ರ
Published On :

90ರ ದಶಕದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಮೆರೆದ ಕೊಡಗಿನ ಕುವರಿ ನಟಿ ಪ್ರೇಮಾ ಅವರಿಗೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕರಾವಳಿ ಜಿಲ್ಲೆಯ ಕೊರಗಜ್ಜ ದೈವದ ಮೊರೆ ಹೋಗಿರುವ ವಿಡಿಯೊವದು.

ನಟಿ ಪ್ರೇಮಾ ತಮ್ಮ ಕುಟುಂಬಸ್ಥರೊಂದಿಗೆ ಉಡುಪಿ ಜಿಲ್ಲೆಯ ಕೊರಗಜ್ಜನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಗಜ್ಜ ದೈವದ ಬಳಿ ಶೀಘ್ರವೇ ಕಂಕಣ ಭಾಗ್ಯ ಕರುಣಿಸುವಂತೆ ಬೇಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಪು ಕೊರಗಜ್ಜ ಸನ್ನಿಧಿಗೆ ಬಂದಿದ್ದ ಪ್ರೇಮಾ, ಭಕ್ತಿಯಿಂದ ಎರಡನೇ ಮದುವೆಗೆ ಕರುಣಿಸು, ಅದೂ ನಾನು ನೋಡಿರುವ ವರನನ್ನೇ ಮದುವೆಯಾಗುವಂತೆ ಕರುಣಿಸು ಎಂದು ಪಾರ್ಥಿಸಿದ್ದಾರಂತೆ. ಖಾಸಗಿ ಕಾರ್ಯಕ್ರಮಕ್ಕೆಂದು ಬಂದಿದ್ದ ಅವರು, ಇದೇ ಸಂದರ್ಭದಲ್ಲಿ ಕೊರಗಜ್ಜ ಸನ್ನಿಧಿಗೂ ಭೇಟಿ ನೀಡಿದ್ದಾರೆ.

ಈಗಾಗಲೇ ಅವರು ವರ ನೋಡಿದ್ದು ಅದೇ ವರನನ್ನು ಮದುವೆ ಮಾಡಿಸುವಂತೆ ಕೊರಗಜ್ಜನಲ್ಲಿ ಪ್ರೇಮಾ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಉಡುಪಿ ಜಿಲ್ಲೆಯ ಕಾಪುವಿನ ಕೊರಗಜ್ಜ ದೈವ ಸನ್ನಿಧಾನಕ್ಕೆ ಭೇಟಿ ಕೊಟ್ಟ ನಂತರ ಅವರು ಕಾಪುವಿನ ಅಯ್ಯಪ್ಪ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ಪ್ರೇಮಾ ಜೊತೆಗೆ ಅವರ ಸಹೋದರ ಅಯ್ಯಪ್ಪ ಹಾಗೂ ಅವರ ಪತ್ನಿ ಜೊತೆಗಿದ್ದರು.

ನಟಿ ಪ್ರೇಮಾ 2006ರಲ್ಲಿ ಕೊಡಗು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನಂತರ ಹೊಂದಾಣಿಕೆ ಬಾರದೆ 2016ರಲ್ಲಿ ವಿಚ್ಛೇದನ ನೀಡಿದ್ದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.