ಮನ್ ಕೀ ಬಾತ್ ನಲ್ಲಿ ಕಳೆದುಹೋದ ಮಣಿಪುರದ ಬಾತ್: ನಟ ಕಿಶೋರ್
ಮಣಿಪುರದಲ್ಲಿನ ಹಿಂಸಾಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ನಟ ಕಿಶೋರ್ ಪ್ರಶ್ನಿಸಿದ್ದಾರೆ.

ಬೆಂಗಳೂರು: ಮಣಿಪುರದಲ್ಲಿನ ಹಿಂಸಾಚಾರ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ನಟ ಕಿಶೋರ್ ಪ್ರಶ್ನಿಸಿದ್ದಾರೆ.
ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್ ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು? ಎಂದು ಕಿರಿಕಾರಿದರು.
ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಮಣಿಪುರದಲ್ಲಿ ಜುಲೈ 8 ರವರೆಗೂ ಶಾಲೆಗಳು ಬಂದ್
2002ರಲ್ಲಿ ಗುಜರಾತ್, 2023ರಲ್ಲಿ ಮಣಿಪುರ.. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ… ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ ಎಂದು ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


