'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ರಿಲೀಸ್ ಡೇಟ್ ಫಿಕ್ಸ್!
ಸೆಟ್ಟೇರಿದ ದಿನದಿಂದಲೂ ವಿಭಿನ್ನ ರೀತಿಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಸೆಟ್ಟೇರಿದ ದಿನದಿಂದಲೂ ವಿಭಿನ್ನ ರೀತಿಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಟೀಸರ್, ಸಾಂಗ್ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದೆ.ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ನಿರ್ಮಿಸಿರುವ ಚಿತ್ರವನ್ನು ರಕ್ಷಿತ್ ಶೆಟ್ಟಿ ಅವರ ಪರಮವಾ ಪಿಕ್ಚರ್ಸ್ ಪ್ರಸ್ತುತಪಡಿಸಿದೆ ಮತ್ತು ಜೀ ಸ್ಟುಡಿಯೋಸ್ ವಿಶ್ವದಾದ್ಯಂತ ವಿತರಿಸುತ್ತಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ.
ಹಾಸ್ಟೆಲ್ ಆವರಣದಲ್ಲಿ ರಾತ್ರೋರಾತ್ರಿ ತೆರೆದುಕೊಳ್ಳುವ ಹಾಸ್ಯಮಯ ಸಿನಿಮಾವನ್ನು ವಿಭಿನ್ನ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. ಪುನೀತ್ ರಾಜ್ಕುಮಾರ್, ಕಿಚ್ಚ ಸುದೀಪ್, ರಕ್ಷಿತ್ ಶೆಟ್ಟಿ, ಮತ್ತು ದಿವ್ಯಾ ಸ್ಪಂದನ ಮತ್ತಿತರರ ಅನೇಕ ನಟರು ಈ ಚಿತ್ರಕ್ಕೆ ಸಾಥ್ ನೀಡಿದ್ದರಿಂದ ಆರಂಭದಿಂದಲೂ ಚಿತ್ರ ಸಾಕಷ್ಟು ಪ್ರಚಾರ ಪಡೆದಿದೆ.
ರಿಷಬ್ ಶೆಟ್ಟಿ, ನಿರ್ದೇಶಕ ಪವನ್ ಕುಮಾರ್, ದಿಗಂತ್ ಮಂಚಾಲೆ ಮತ್ತು ಶೈನ್ ಶೆಟ್ಟಿ ಅವರಂತಹ ಪ್ರಮುಖ ವ್ಯಕ್ತಿಗಳು ವಿಶೇಷ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ರಾಜ್ಯಾದ್ಯಂತ 500 ಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಅಭಿನಯಿಸಿದ್ದಾರೆ. ಕ್ರಿಸ್ಟೋಫರ್ ನೋಲನ್ ಅವರ ಒಪೆನ್ಹೈಮರ್ ಜೊತೆಗೆ ಚಿತ್ರವು ಥಿಯೇಟರ್ಗಳಲ್ಲಿ ಬರಲಿದೆ ಎಂದು ವಿಶಿಷ್ಟ ವೀಡಿಯೊದೊಂದಿಗೆ ಚಿತ್ರ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.
ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ. ಸುರೇಶ್ ಸಂಕಲನದ ಹೊಣೆ ಹೊತ್ತಿದ್ದಾರೆ. ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಘೋಷಿಸುವುದರೊಂದಿಗೆ, ಜುಲೈ 10 ರಂದು ಚಿತ್ರದ ಟ್ರೈಲರ್ ಬಿಡುಗಡೆಗೆ ತಯಾರಕರು ಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


