ಸಿನಿಮಾ ಸುದ್ದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ನಿರ್ದೇಶಕ ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್

ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ಬಾಳಲ್ಲಿ ಎರಡನೇ ಮಗುವಿನ ಆಗಮನವಾಗಿದೆ. ಅಪೇಕ್ಷಾ ಪುರೋಹಿತ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ನಿರ್ದೇಶಕ ಪವನ್ ಒಡೆಯರ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್
ಪವನ್ ಒಡೆಯರ್-ಅಪೇಕ್ಷಾ ಪುರೋಹಿತ್
Published On :

ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ ಬಾಳಲ್ಲಿ ಎರಡನೇ ಮಗುವಿನ ಆಗಮನವಾಗಿದೆ. ಅಪೇಕ್ಷಾ ಪುರೋಹಿತ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ನಿರ್ದೇಶಕ ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಪುರೋಹಿತ್ ಅವರಿಗೆ ಈಗಾಗಲೇ ಶೌರ್ಯ ಎಂಬ ಗಂಡು ಮಗನಿದ್ದಾನೆ. ಇದೀಗ ಅವರ ಬಾಳಲ್ಲಿ ಮಹಾಲಕ್ಷ್ಮಿಯ ಆಗಮನವಾಗಿದೆ.

ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕರ ಪೈಕಿ ಪವನ್ ಒಡೆಯರ್ ಕೂಡ ಒಬ್ಬರು. ‘ಗೋವಿಂದಾಯ ನಮಃ’, ‘ಗೂಗ್ಲಿ’, ‘ರಣವಿಕ್ರಮ’, ‘ಜೆಸ್ಸಿ’, ‘ನಟಸಾರ್ವಭೌಮ’ ಮುಂತಾದ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿರುವ ಪವನ್ ಒಡೆಯರ್ ಅವರ ಚಲನಚಿತ್ರ ಡೊಳ್ಳು 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, 2022 ರಲ್ಲಿ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.