ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅರುಣ್ ರಾಮ್ ಗೌಡ: ಅಯೋಧ್ಯೆಯಲ್ಲಿ ಟೀಸರ್ ಅನಾವರಣ
'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ನಟ ಅರುಣ್ ರಾಮ್ ಗೌಡ ಪುನೀತ್ ರಾಜ್ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

'ಮುದ್ದು ಮನಸೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ನಟ ಅರುಣ್ ರಾಮ್ ಗೌಡ ಪುನೀತ್ ರಾಜ್ಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.
ಈಗ ಸದ್ಯ ನಟ ಅರುಣ್ ರಾಮ್ ಗೌಡ ಅಭಿನಯದ ಹೆಸರಿಡದ ಚಿತ್ರದ ಫಸ್ಟ್ ಗ್ಲಿಂಪ್ಸ್ ಅನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಡುಗಡೆ ಮಾಡುವ ಮೂಲಕ ಚಿತ್ರರಂಡ ಗಮನ ಸೆಳೆದಿದೆ. ಕೆಲ ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದಾರೆ.
ಅರುಣ್ ನಿರ್ದೇಶನದ ಮೊದಲ ಚಿತ್ರ: ಈ ಬಗ್ಗೆ ಮಾತನಾಡಿರೋ ನಟ ಅರಣ್ ರಾಮ್ ಗೌಡ, ಇದೊಂದು ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ. ಅಷ್ಟೇ ಅಲ್ಲ ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಜನಪ್ರಿಯರಾಗಿರುವವರೇ ಇರುತ್ತಾರೆ.
ಜುಲೈ 7 ನನ್ನ ಹುಟ್ಟುಹಬ್ಬದ ಈ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


