ಚೆಕ್ ಬೌನ್ಸ್ ಪ್ರಕರಣ: ನಟ ನೀನಾಸಂ ಅಶ್ವತ್ಥ್ ಬಂಧನ-ಬಿಡುಗಡೆ
ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ.

ಹಾಸನ: ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಹಾಸನದ ಬಡಾವಣೆ ಠಾಣೆ ಪೊಲೀಸರು ನೀನಾಸಂ ಅಶ್ವತ್ಥ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ನ್ಯಾಯಾಧೀಶರ ಬಳಿ ತಪ್ಪೊಪ್ಪಿಕೊಂಡ ಅವರನ್ನು ಶೇ 25ರಷ್ಟು ಹಣ ಪಾವತಿಸಿದ ಬಳಿಕ ಬಿಡುಗಡೆ ಮಾಡಲಾಗಿದೆ. ಹಾಸನದ ರೋಹಿತ್ ಎಂಬುವರಿಂದ ಹಸುಗಳನ್ನು ಖರೀದಿಸಿದ್ದ ಅಶ್ವತ್ಥ್ ₹1.5 ಲಕ್ಷ ಮೊತ್ತದ ಚೆಕ್ ನೀಡಿದ್ದರು. ಆದರೆ, ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ರೋಹಿತ್, ಹಾಸನದ ಜೆಎಂಎಫ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.
ನಟ ನೀನಾಸಂ ಅಶ್ವತ್ಥ್ ಅವರು ಹಾಸನದ ರೋಹಿತ್ ಎಂಬುವವರಿಂದ ಹಸು ಖರೀದಿ ಮಾಡಿದ್ದರು. ಆಗ 1.5 ಲಕ್ಷ ರೂಪಾಯಿ ಮೌಲ್ಯದ ಚೆಕ್ ನೀಡಿದ್ದರು. ಆದರೆ ಹಣ ಪಡೆಯಲು ರೋಹಿತ್ ಅವರು ಬ್ಯಾಂಕ್ಗೆ ಹೋದಾಗ ಚೆಕ್ಬೌನ್ಸ್ ಆಗಿರುವುದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಹಾಸನದ ಜೆಎಮ್‌ಎಫ್‌ಸಿ ಕೋರ್ಟ್‌ನಲ್ಲಿ ರೋಹಿತ್ ಅವರು ಕೇಸ್ ಹಾಕಿದ್ದರು. ಈ ಪ್ರಕರಣದಲ್ಲಿ ನೀನಾಸಂ ಅಶ್ವತ್ಥ್ ಅವರು ಕೋರ್ಟ್ಗೆ ಹಾಜರಾಗಿರಲಿಲ್ಲ. ಐದನೇ ಬಾರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು.
ನ್ಯಾಯಾಲದ ಮುಂದೆ ಹಾಜರುಪಡಿಸಿದಾಗ ನೀನಾಸಂ ಅಶ್ವತ್ಥ್ ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅಲ್ಲದೇ ಶೇಕಡ 25ರಷ್ಟು ಹಣವನ್ನು ನೀಡಿದ್ದಾರೆ. ಇನ್ನುಳಿದ ಮೊತ್ತ ಪಾವತಿ ಮಾಡಲು ಜಡ್ಜ್ ಬಳಿ ಸಮಯಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ನೀನಾಸಂ ಅಶ್ವತ್ಥ್ ಅವರಿಗೆ ಜಾಮೀನು ನೀಡಲಾಗಿದೆ. ಅವರನ್ನು ಬಿಡುಗಡೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


