ಸಿನಿಮಾ ಸುದ್ದಿ

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ

ಹಿರಿಯ ನಟ ರವೀಂದ್ರ ಮಹಾಜನಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿದೆ. ತಲೆಗೌನ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ
ರವೀಂದ್ರ ಮಹಾಜನಿ ಸಂಗ್ರಹ ಚಿತ್ರ
Published On :

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿದೆ. ತಲೆಗೌನ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅವರು ಮೂರು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ. ನಿನ್ನೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಬಂದು ಪರಿಶೀಲಿಸಿದಾಗ ಅವರು ವಾಸವಿದ್ದ ಅಪಾರ್ಟ್ ಮೆಂಟಿನಿಂದ ಕೆಟ್ಟ ವಾಸನೆ ಹೊರಬರುತ್ತಿತ್ತು.

ಕೂಡಲೇ ಪೊಲೀಸರ ತಂಡ ಅವರು ವಾಸವಿದ್ದ ಅಪಾರ್ಟ್ ಮೆಂಟಿನ ಮನೆಯ ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಮೃತದೇಹ ಪತ್ತೆಯಾಗಿತ್ತು. 

ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆಯಿಂದ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. 

ರವೀಂದ್ರ ಮಹಾಜನಿ ಮರಾಠಿ ಚಿತ್ರಗಳಾದ 'ಮುಂಬೈ ಚ ಫೌದರ್', ಝೂನ್, ಕಾಲತ್ ನಕಲತ್ ನಲ್ಲಿ ನಟಿಸಿದ್ದಾರೆ. ಆಶುತೋಷ್ ಗೌರಿಕರ್ ಅವರ 2019ರಲ್ಲಿ ಬಿಡುಗಡೆಯಾದ ಪಾಣಿಪತ್ ಚಿತ್ರದಲ್ಲಿ ಕೂಡ ನಟಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.