ಸಿನಿಮಾ ಸುದ್ದಿ

ಮಹಾಭಾರತದ 'ಶಕುನಿ' ಪಾತ್ರಧಾರಿ ಗೂಫಿ ಪೈಂಟಲ್ ನಿಧನ

ಟಿವಿ ಸೀರಿಯಲ್ ‘ಮಹಾಭಾರತ’ದಲ್ಲಿ ಶಕುನಿ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟ ಗೂಫಿ ಪೈಂತಲ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಗೂಫಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಮಹಾಭಾರತದ 'ಶಕುನಿ' ಪಾತ್ರಧಾರಿ ಗೂಫಿ ಪೈಂಟಲ್ ನಿಧನ
ಗೂಫಿ ಪೈಂಟಲ್
Published On :

ಟಿವಿ ಸೀರಿಯಲ್ ‘ಮಹಾಭಾರತ’ದಲ್ಲಿ ಶಕುನಿ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟ ಗೂಫಿ ಪೈಂತಲ್ ಅವರು  ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಗೂಫಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಗೂಫಿ ಅವರನ್ನು ವಾರಗಳ ಹಿಂದೆ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ. ಅವರ ಸೋದರ ಸಂಬಂಧಿ ಹಿತೇನ್ ಪೈಂತಲ್ ಅವರು ಈ ನೋವಿನ ಸಂಗತಿ ಹಂಚಿಕೊಂಡಿದ್ದಾರೆ.

‘ದುರದೃಷ್ಟವಶಾತ್ ಗೂಫಿ ಇನ್ನಿಲ್ಲ. ಅವರು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು. ಯಾವುದೇ ನೋವಿಲ್ಲದೆ ಅವರು ಮೃತಪಟ್ಟರು’ ಎಂದು ಹಿತೇನ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗೂಫಿಗೆ ಅನಾರೋಗ್ಯ ಕೈ ಕೊಟ್ಟ ಬಗ್ಗೆ ವರದಿ ಆಗಿತ್ತು. ಅವರು ಆಸ್ಪತ್ರೆಯಿಂದ ಮರಳಿ ಬರಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಸುಳ್ಳಾಗಿದೆ.

Story image

ಗೂಫಿ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರಿಗೆ ಸಾಕಷ್ಟು ಸಮಯದಿಂದ ಆರೋಗ್ಯ ಸರಿ ಇಲ್ಲ. ಈಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಕಳೆದ ಏಳೆಂಟು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಅವರ ಆರೋಗ್ಯ ಸ್ಥಿರ ಸ್ಥಿತಿಗೆ ಬಂದಿದೆ’ ಎಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಮೃತಪಟ್ಟಿದ್ದಾರೆ.

1988 ರಿಂದ 1990ವರೆಗೆ ಸುಮಾರು 2 ವರ್ಷಗಳ ಕಾಲ ಮಹಾಭಾರತ ಧಾರಾವಾಹಿ ಡಿಡಿ-1 ರಲ್ಲಿ ಪ್ರಸಾರವಾಗಿತ್ತು. ಜನರ ಮೆಚ್ಚುಗೆ ಗಳಿಸಿದವರಲ್ಲಿ ಶಕುನಿ ಮಾಮ ಪಾತ್ರ ಕೂಡಾ ಒಂದು. ಗುಫಿ ಪೈಂಟಲ್‌ ಶಕುನಿ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದರು. ಆರ್‌ ಛೋಪ್ರಾ ಹಾಗೂ ರವಿ ಛೋಪ್ರಾ ಈ ಧಾರಾವಾಹಿಯನ್ನು ನಿರ್ದೇಶಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.