'ರೇವ್ ಪಾರ್ಟಿ' ಶೂಟಿಂಗ್ ಮುಕ್ತಾಯ: ಆಗಸ್ಟ್‌ನಲ್ಲಿ ಬಿಡುಗಡೆಗೆ ಸಜ್ಜು
ರಾಜು ಬೋನಗಾನಿ ನಿರ್ದೇಶನ ಹಾಗೂ ಅವರದ್ದೇ ಬ್ಯಾನರ್ 'ಬೋನಗಾನಿ ಎಂಟರ್‌ಟೈನ್‌ಮೆಂಟ್ಸ್' ಅಡಿಯಲ್ಲಿ ನಿರ್ಮಿಸುತ್ತಿರುವ 'ರೇವ್ ಪಾರ್ಟಿ' ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ತಯಾರಕರು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ.

ರಾಜು ಬೋನಗಾನಿ ನಿರ್ದೇಶನ ಹಾಗೂ ಅವರದ್ದೇ ಬ್ಯಾನರ್ 'ಬೋನಗಾನಿ ಎಂಟರ್‌ಟೈನ್‌ಮೆಂಟ್ಸ್' ಅಡಿಯಲ್ಲಿ ನಿರ್ಮಿಸುತ್ತಿರುವ 'ರೇವ್ ಪಾರ್ಟಿ' ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ತಯಾರಕರು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ.
ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 'ರೇವ್ ಪಾರ್ಟಿ' ಬಿಡುಗಡೆಯಾಗಲಿದೆ. ಐಶ್ವರ್ಯಾ ಗೌಡ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರೆ, ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚಕ್ರವರ್ತಿ, ಸುಚೇಂದ್ರ ಪ್ರಸಾದ್, ತಾರಕ್ ಪೊನ್ನಪ್ಪ ಮತ್ತು ಮತ್ತಿತರರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.
ಮೈಸೂರು, ಉಡುಪಿ, ಬೆಂಗಳೂರು ಮತ್ತು ಮಂಗಳೂರಿನಂತಹ ವಿವಿಧ ಸ್ಥಳಗಳಲ್ಲಿ 35 ದಿನಗಳ ವೇಳಾಪಟ್ಟಿಯೊಳಗೆ ಚಿತ್ರೀಕರಣವನ್ನು ಪೂರ್ಣಗೊಳಿಸಲಾಗಿದೆ.ಚಿತ್ರ ಸಕಾಲದಲ್ಲಿ ಪೂರ್ಣಗೊಂಡಿರುವುದಕ್ಕೆ ಸಂತೃಪ್ತಿ ವ್ಯಕ್ತಪಡಿಸಿರುವ ನಿರ್ದೇಶಕ ರಾಜು ಬೋನಗಾನಿ, ಕಲಾವಿದರು ಮತ್ತು ತಂತ್ರಜ್ಞರಿಗೆ ಕೃತಜ್ಞತೆ ಸಲ್ಲಿಸಿದರು.
ರೇವ್ ಪಾರ್ಟಿಗಳ ಆರಂಭ, ಒಳಗೊಂಡಿರುವ ಜನರು ಮತ್ತು ಯುವಕರ ಮೇಲೆ ಬೀರುವ ಋಣಾತ್ಮಕ ಪರಿಣಾಮವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಚಿತ್ರದ ಕಂಟೆಂಟ್ ಯುವ ಪ್ರೇಕ್ಷಕರಿಗೆ ಹಿಡಿಸುತ್ತದೆ ಎಂಬ ವಿಶ್ವಾಸ ನಿರ್ದೇಶಕರದ್ದು. ರೇವ್ ಪಾರ್ಟಿ ಚಿತ್ರಕ್ಕೆ ದಿಲೀಪ್ ಭಂಡಾರಿ ಸಂಗೀತ ನೀಡಿದರೆ, ವೆಂಕಟ್ ಮನ್ನಂ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


