ಸಿನಿಮಾ ಸುದ್ದಿ

ಬಹುನಿರೀಕ್ಷಿತ ಬೆಂಗಳೂರು ಬಾಯ್ಸ್​ ಚಿತ್ರ ಜೂನ್ 30ಕ್ಕೆ ಬಿಡುಗಡೆ

ವಿ. ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಬಹುನಿರೀಕ್ಷಿತ ಬೆಂಗಳೂರು ಬಾಯ್ಸ್​ ಚಿತ್ರ ಜೂನ್ 30ಕ್ಕೆ ಬಿಡುಗಡೆ
ಬೆಂಗಳೂರು ಬಾಯ್ಸ್ ಚಿತ್ರದ ಸ್ಟಿಲ್.
Published On :

ವಿ. ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಜೂನ್ 30ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬಿಡುಗಡೆ ಹೊಸ್ತಿಲಲ್ಲಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಹೊಸ ಹಾಡು ರಿಲೀಸ್ ಆಗಿದೆ. ಕಾಮಿಡಿ ಕಿಂಗ್ ಚಿಕ್ಕಣ್ಣ  ದ್ವನಿಯಾಗಿರುವ ಟಪಾಸ್ ಹಾಡು ಈಗ ಭಾರೀ ಸದ್ದು ಮಾಡುತ್ತಿದೆ.

ಸಾಫ್ಟ್‌ವೇರ್ ಗಳ ಪಾಡು ವಿವರಿಸುವ ಹಾಡು ಇದಾಗಿದೆ. ಧರ್ಮವಿಷ್ ಸಂಗೀತದ ಈ ಹಾಡಿಗೆ ಅರಸು ಅಂಥರೆ ಸಾಹಿತ್ಯ ಬರೆದಿದ್ದಾರೆ.

ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್.

ಬೆಂಗಳೂರು ಬಾಯ್ಸ್ ಸಿನಿಮಾಗೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ ಕ್ರಿಯೇಟಿವ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದು, ರವಿ ಶ್ರೀರಾಮ್ ಕೋ ಡೈರೆಕ್ಟರ್ ಆಗಿ, ಡಿ ಆರ್ ಶ್ರೀನಿವಾಸ್ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ.

ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಟ್ಯೂನ್ ಹಾಕಿದ್ದಾರೆ. ಸಿನಿಮಾ ಆಸಕ್ತಿ ಹೊಂದಿರುವ ತೆಲುಗು ಮೂಲದ ವಿಕ್ರಮ್‌ ಕೆ.ವೈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಚಿತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್ ಮತ್ತು ರೋಹಿತ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ.

ಕಾಮಿಡಿ ಕಿಂಗ್ ಚಿಕ್ಕಣ್ಣ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದು, ಐಟಿಬಿಟಿ ಉದ್ಯೋಗಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.