ಸಿನಿಮಾ ಸುದ್ದಿ

ಶೂಟಿಂಗ್ ವೇಳೆ ಬಿದ್ದು ಪೃಥ್ವಿರಾಜ್‌ ಸುಕುಮಾರನ್‌ಗೆ ಬಲವಾದ ಪೆಟ್ಟು:  ಕಾಲಿಗೆ ಶಸ್ತ್ರ ಚಿಕಿತ್ಸೆ

ಚಿತ್ರೀಕರಣದ ವೇಳೆ ಅವಘಡ ಸಂಭವಿಸಿ ಮಾಲಿವುಡ್‌ ಸಿನಿಮಾರಂಗದ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರ ಕಾಲಿಗೆ ಬಲವಾದ ಪೆಟ್ಟು ಬಿದ್ದಿರುವ ಘಟನೆ ಕೊಚ್ಚಿನ್‌ನಲ್ಲಿರುವ ಮರಯೂರ್ ನಲ್ಲಿ ಭಾನುವಾರ (ಜೂ.25 ರಂದು) ನಡೆದಿದೆ.

ಶೂಟಿಂಗ್ ವೇಳೆ ಬಿದ್ದು ಪೃಥ್ವಿರಾಜ್‌ ಸುಕುಮಾರನ್‌ಗೆ ಬಲವಾದ ಪೆಟ್ಟು:  ಕಾಲಿಗೆ ಶಸ್ತ್ರ ಚಿಕಿತ್ಸೆ
ಪೃಥ್ವಿರಾಜ್‌ ಸುಕುಮಾರನ್‌
Published On :

ಕೊಚ್ಚಿ: ಚಿತ್ರೀಕರಣದ ವೇಳೆ ಅವಘಡ ಸಂಭವಿಸಿ ಮಾಲಿವುಡ್‌ ಸಿನಿಮಾರಂಗದ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರ ಕಾಲಿಗೆ ಬಲವಾದ ಪೆಟ್ಟು ಬಿದ್ದಿರುವ ಘಟನೆ ಕೊಚ್ಚಿನ್‌ನಲ್ಲಿರುವ ಮರಯೂರ್ ನಲ್ಲಿ ಭಾನುವಾರ (ಜೂ.25 ರಂದು) ನಡೆದಿದೆ.

ಮಲಯಾಳಂನ 'ವಿಲಾಯತ್ ಬುದ್ಧ್' ಸಿನಿಮಾ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದೆ. ಒಂದು ಆಕ್ಷನ್ ಸೀಕ್ವೆನ್ಸ್ ಶೂಟಿಂಗ್ ವೇಳೆ ನಟ ಪೃಥ್ವಿರಾಜ್‌ ಸುಕುಮಾರನ್‌ ಗಾಯಗೊಂಡಿದ್ದಾರೆ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ವೈದ್ಯರು ಹೇಳಿರುವುದಾಗಿ ವರದಿಯಾಗಿದೆ. ಪೃಥ್ವಿರಾಜ್ ನಟನಾಗಿ ಮಾತ್ರವಲ್ಲದೇ ನಿರ್ದೇಶಕರಾಗಿ ನಿರ್ಮಾಪಕರಾಗಿ ಗುರ್ತಿಸಿಕೊಂಡಿದ್ದಾರೆ. ಪರಭಾಷಾ ಸಿನಿಮಾಗಳಲ್ಲೂ ಕೂಡ ಅವರು ನಟಿಸಿ ಪ್ರೇಕ್ಷಕರ ಮನಗೆದ್ದಿದ್ದಾರೆ.

ಕೇರಳದ ಆರ್‌ಟಿಸಿ ಬಸ್‌ನಲ್ಲಿ ಚಿತ್ರದ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೀತಿತ್ತು. ಈ ವೇಳೆ ಪೃಥ್ವಿರಾಜ್ ಬಸ್‌ನಿಂದ ಜಾರಿ ಬಿದಿದ್ದಾರೆ. ಮರಯೂರು ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಪೃಥ್ವಿರಾಜ್ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಇಂದು(ಜೂನ್ 26) ಪೃಥ್ವಿರಾಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಮೂರು ತಿಂಗಳು ಬೆಡ್ ರೆಸ್ಟ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿದು ಬಂದಿದೆ.

ಪೃಥ್ವಿರಾಜ್ ಸುಕುಮಾರನ್ ಕೊನೆಯದಾಗಿ ಶಾಜಿ ಕೈಲಾಸ್ ನಿರ್ದೇಶನದ ಮಲಯಾಳಂ ಚಿತ್ರ ʼಕಾಪಾʼದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಪೃಥ್ವಿರಾಜ್ ಚಿತ್ರೀಕರಣದಲ್ಲಿರುವಾಗ ಈ ಅವಘಡ ಸಂಭವಿಸಿದೆ.

ಪೃಥ್ವಿರಾಜ್ ಸುಕುಮಾರನ್ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ಅವರ ʼಸಲಾರ್ʼ ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಳ್ಳಲಿದ್ದಾರೆ. ʼಆಡುಜ್ಜೀವಿತಂʼ ಕೂಡ ಒಂದೆರಡು ತಿಂಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ʼವಿಲಾಯತ್ ಬುದ್ಧʼ ಚಿತ್ರವನ್ನು ಜಯನ್ ನಂಬಿಯಾರ್ ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.