ಮತದಾನದ ಮಹತ್ವವನ್ನು ತಿಳಿಸಲು ಬರುತ್ತಿದೆ ಚೇತನ್ ಚಂದ್ರ ಅಭಿನಯದ 'ಪ್ರಭುತ್ವ'
'ಪ್ರಭುತ್ವ' ಚಿತ್ರದಲ್ಲಿ ಚೇತನ್ ಚಂದ್ರ ನಾಯಕನಾಗಿ ನಟಿಸುತ್ತಿದ್ದು, ಕರ್ನಾಟಕ ಚುನಾವಣೆಯ ಹೊಸ್ತಿಲಲ್ಲಿ ಚಿತ್ರಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸುತ್ತಿದ್ದಾರೆ.

'ಪ್ರಭುತ್ವ' ಚಿತ್ರದಲ್ಲಿ ಚೇತನ್ ಚಂದ್ರ ನಾಯಕನಾಗಿ ನಟಿಸುತ್ತಿದ್ದು, ಕರ್ನಾಟಕ ಚುನಾವಣೆಯ ಹೊಸ್ತಿಲಲ್ಲಿ ಚಿತ್ರಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸುತ್ತಿದ್ದಾರೆ
ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಚಿತ್ರತಂಡ ಆಗಲೇ ಚಿತ್ರಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ರಂಗನಾಥ್ ನಿರ್ದೇಶನದ ಈ ಚಿತ್ರ ಮತದಾನದ ಮಹತ್ವವನ್ನು ತಿಳಿಸುತ್ತದೆ ಮತ್ತು ಅದನ್ನು ಚಿತ್ರದ ಟ್ರೈಲರ್ ಮೂಲಕ ಹೊರತರಲಾಗಿದೆ. ಟ್ರೈಲರ್ ಅನ್ನು ರಾಜಕೀಯ ನಾಯಕ ರವೀಂದ್ರ ಬಿಡುಗಡೆ ಮಾಡಿದರು. ಜೇಂಕಾರ್ ಮ್ಯೂಸಿಕ್ ವೇದಿಕೆಯಲ್ಲಿ ಹೊರಬಂದಿದೆ.
ರವಿರಾಜ್ ಎಸ್ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಅವರ ತಂದೆ ಡಾ ಶಿವಕುಮಾರ್ ಕಥೆ ಬರೆದಿದ್ದಾರೆ. ಗೌಳಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಪವನಗೌಡ ಅವರಿಗೆ ಚಿತ್ರದಲ್ಲಿ ಮತ್ತೊಂದು ವಿಶಿಷ್ಟ ಪಾತ್ರವಿದೆ. ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ವಿಜಯ್ ಚೆಂಡೂರ್, ವೀಣಾ ಸುಂದರ್ ಮತ್ತು ಅನಿತಾ ಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ ಮತ್ತು ಚಿತ್ರ ನಿರ್ಮಾಪಕರು ಚುನಾವಣೆಗೂ ಮೊದಲು ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


