ಸಿನಿಮಾ ಸುದ್ದಿ

ಉರಿಗೌಡ-ನಂಜೇಗೌಡ ಸಿನಿಮಾಗೆ ಸಚಿವ ಮುನಿರತ್ನ ನಿರ್ಮಾಣ!

ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ - ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ .

ಉರಿಗೌಡ-ನಂಜೇಗೌಡ ಸಿನಿಮಾಗೆ ಸಚಿವ ಮುನಿರತ್ನ ನಿರ್ಮಾಣ!
ಮುನಿರತ್ನ
Published On :

ಬೆಂಗಳೂರು: ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ - ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ .

ಈ ಸಿನಿಮಾ ಮಾಡಲೆಂದು ಅವರು ಎರಡು ಟೈಟಲ್ ಅನ್ನು ರಿಜಿಸ್ಟರ್ ಕೂಡ ಮಾಡಿಸಿದ್ದಾರೆ. ಕುರುಕ್ಷೇತ್ರ ಸೇರಿದಂತೆ ಹಲವು ಭಾರೀ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಮುನಿರತ್ನ, ಈ ಬಾರಿ ವಿವಾದಿದ ವ್ಯಕ್ತಿಗಳ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಉರಿಗೌಡ –ನಂಜೇಗೌಡ’ ಅಥವಾ ‘ನಂಜೇಗೌಡ-ಉರಿಗೌಡ’ ಎನ್ನುವ ಹೆಸರನ್ನೂ ಇಡಲಿದ್ದಾರೆ. ನಿನ್ನೆಯಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಈಗ ಬಿಜೆಪಿ- ಕಾಂಗ್ರೆಸ್, ಜೆಡಿಎಸ್ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿರುವ ಹೆಸರುಗಳಾದ ಮಂಡ್ಯದ ಉರಿಗೌಡ ಮತ್ತು ನಂಜೇಗೌಡ ಪಾತ್ರಗಳು ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸುಲ್ತಾನನಾಗಿ ಆಡಳಿತ ಮಾಡುತ್ತಿದ್ದ ಟಿಪ್ಪುವನ್ನು ಮಂಡ್ಯದ ಉರಿಗೌಡ, ನಂಜೇಗೌಡ ಕೊಂದಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.