ವಿಶ್ವಸಂಸ್ಥೆ ಮಂಡಳಿ ವಾರ್ಷಿಕ ಸಭೆಯಲ್ಲಿ ಕೇವಲ 12 ಸೆಕೆಂಡ್ ಗೆ ರಿಷಬ್ ಶೆಟ್ಟಿ ಭಾಷಣ ಮೊಟಕು, ಕಾರಣವೇನು?
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ವಾರ್ಷಿಕ ಸಭೆಯಲ್ಲಿ ಇತ್ತೀಚೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮಾತನಾಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.
ವಿಶ್ವಸಂಸ್ಥೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ರಿಷಬ್ ಪರಿಸರ ಸಂರಕ್ಷಣೆ ವಿಷಯದಲ್ಲಿ ಭಾಷಣ ಮಾಡಲು ತಯಾರಿ ನಡೆಸಿಕೊಂಡು ಹೋಗಿದ್ದರು. ಅಲ್ಲಿ ಕನ್ನಡದಲ್ಲಿ ರಿಷಬ್ ಶೆಟ್ಟಿ ಭಾಷಣ ಆರಂಭಿಸಿದ್ದರು. ಅವರ ಭಾಷಣ ಇಂಗ್ಲಿಷ್ ಅಥವಾ ಬೇರೆ ಭಾಷೆಗಳಿಗೆ ಅನುವಾದ ಆಗದ ಕಾರಣ ಅವರ ಭಾಷಣವನ್ನು ಆರಂಭದಲ್ಲಿ ತಡೆಹಿಡಿಯಲಾಯಿತು. ತಾಂತ್ರಿಕ ಸಮಸ್ಯೆ ಉಂಟಾಯಿತು.
ವಿಶ್ವಸಂಸ್ಥೆಯಲ್ಲಿ ಯಾವುದೇ ಭಾಷೆಯಲ್ಲಿ ಭಾಷಣ ಮಾಡುವ ಅವಕಾಶವಿದೆ. ಇಂಗ್ಲಿಷ್ ಸೇರಿದಂತೆ ವಿಶ್ವಸಂಸ್ಥೆಯ ಅನುಮೋದನೆ ಇರುವ ಕೆಲ ಭಾಷೆಗಳಿಗೆ ಅನುವಾದ ಮಾಡಿ ಪ್ರಸಾರ ಮಾಡಲಾಗುತ್ತದೆ. ರಿಷಬ್ ಶೆಟ್ಟಿಯವರ ಭಾಷಣ ತಾಂತ್ರಿಕ ಸಮಸ್ಯೆಯಿಂದ ಅನುವಾದ ಪ್ರಸಾರವಾಗಲಿಲ್ಲ. ಹೀಗಾಗಿ ರಿಷಬ್ ಶೆಟ್ಟಿ ಮಾತನ್ನು ಕೇವಲ 12 ಸೆಕೆಂಡ್ ಗೆ ತಡೆಹಿಡಿದು ಬೇರೆಯವರಿಗೆ ಅವಕಾಶ ಮಾಡಿಕೊಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


