ಸಿನಿಮಾ ಸುದ್ದಿ

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣು

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣು
ಚೈತನ್ಯ
Published On :

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಕೋರಿಯೊಗ್ರಾಫರ್ ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ನೇಣು ಬಿಗಿದುಕೊಂಡು ಚೈತನ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಗಳು ತಿಳಿಸಿವೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿರುವ ಚೈತನ್ಯ ಅವರು ಸಾವಿಗೆ ಸಾಲಬಾಧೆಯೇ ಕಾರಣವೆಂದು ಹೇಳಿಕೊಂಡಿದ್ದಾರಂದು ವರದಿಗಳು ತಿಳಿಸಿವೆ.

ಅವರಿಗೆ 30 ವರ್ಷ ವಯಸ್ಸಾಗಿತ್ತು. ನೆಲ್ಲೂರಿನಲ್ಲಿ ತಮ್ಮ ಮನೆಯಲ್ಲಿ ಭಾನುವಾರ ಚೈತನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

‘ನನ್ನ ತಂದೆ ತಾಯಿ ಹಾಗೂ ಸಹೋದರಿ ಚೆನ್ನಾಗಿ ನೋಡಿಕೊಂಡರು. ಆದರೆ, ನಾನು ಅನಿವಾರ್ಯ ಕಾರಣಗಳಿಂದಾಗಿ ಸಾಲ ಮಾಡಿಕೊಂಡೆ. ಅದನ್ನು ತೀರಿಸಲು ಕಷ್ಟವಾಯಿತು. ಹಾಗಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದೇನೆ. ನೆಲ್ಲೂರಿನಲ್ಲಿ ಇಂದು ನನ್ನ ಕೊನೆಯ ದಿನ’ ಎಂದು ಚೈತನ್ಯ ವಿಡಿಯೋದಲ್ಲಿ ಹೇಳಿಕೊಂಡಿರುವುದು ಕಂಡು ಬಂದಿದೆ.

ತೆಲುಗಿನ ಜನಪ್ರಿಯ ಡ್ಯಾನ್ಸ್ ಶೋ ‘ಡಿ’ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ಚೈತನ್ಯ ಅವರು, ಪ್ರಭುದೇವ ಸೇರಿದಂತೆ ಹಲವರೊಂದಿಗೆ ಕೆಲಸ ಮಾಡಿದ್ದಾರೆ. ಅಲ್ಲದೇ, ಅನೇಕ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿಯೂ ಕೆಲಸ ಮಾಡಿದ್ದಾರೆ. ಚೈತನ್ಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.