ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಗೆ ಮತ್ತೊಂದು ಗರಿ; ನಿರ್ದೇಶಕ ಕಿರಣ್ರಾಜ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ರಕ್ಷಿತ್ ಶೆಟ್ಟಿ ನಟಿಸಿರುವ 777 ಚಾರ್ಲಿ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಕಿರಣ್ರಾಜ್ ಅವರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ.

ಜೂನ್ 10ಕ್ಕೆ ಕಿರಣ್ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ ವರ್ಷವಾಗಲಿದೆ. ಚಿತ್ರತಂಡ ವಾರ್ಷಿಕೋತ್ಸವವನ್ನು ಆಚರಿಸಲು ಸಿದ್ಧವಾಗಿದೆ. ಈಗಲೂ ಚಿತ್ರ ಹಾಟ್ ಟಾಪಿಕ್ ಆಗಿ ಮುಂದುವರಿಯುತ್ತಿದ್ದು, ಮತ್ತೊಂದು ಹೊಸ ಸುದ್ದಿ ಎಂದರೆ ರಕ್ಷಿತ್ ಶೆಟ್ಟಿ ನಟಿಸಿರುವ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ.
ಇದರ ಜೊತೆಗೆ, ಚಾರ್ಲಿ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಕಿರಣ್ರಾಜ್ ಅವರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ.
ಈ ಬಗ್ಗೆ ಮಾತನಾಡುವ ಕಿರಣರಾಜ್, 'ಚಿತ್ರವನ್ನು ಗುರುತಿಸುತ್ತಿರುವುದು ಇಡೀ ಪಾತ್ರವರ್ಗ ಮತ್ತು ತಂಡದ ಶ್ರಮ ಮತ್ತು ಪರಿಶ್ರಮದ ಫಲಿತಾಂಶವಾಗಿದೆ ಎಂದು ನಾನು ನಂಬುತ್ತೇನೆ. ಒಂದು ಹಂತದಲ್ಲಿ, ನಮ್ಮ ಕನ್ನಡ ಚಲನಚಿತ್ರಗಳು ರಾಜ್ಯದ ಗಡಿಯನ್ನು ದಾಟುತ್ತಿರಲಿಲ್ಲ. ಆದರೆ, ಈಗ ನಮಗೆ ಸ್ಪರ್ಧಿಸಿ ಗೆಲ್ಲುವ ಅವಕಾಶವಿದ್ದು, ಅದು ದೊಡ್ಡ ಗೌರವವಾಗಿದೆ. ರಾಷ್ಟ್ರೀಯ ವೇದಿಕೆಗಳಲ್ಲಿ ತಾರೆಯರನ್ನು ಅಭಿನಂದಿಸುತ್ತಿರುವಾಗ, ಚಲನಚಿತ್ರವು ಮನ್ನಣೆಯನ್ನು ಪಡೆಯುವುದು ಅಷ್ಟೇ ಅಗತ್ಯವಾಗಿದೆ' ಎನ್ನುತ್ತಾರೆ.
ಕುತೂಹಲಕಾರಿಯಾಗಿ, 777 ಚಾರ್ಲಿ ಸಿನಿಮಾ ಈಗಲೂ ಬೇಡಿಕೆಯಲ್ಲಿದೆ ಮತ್ತು ಚಿತ್ರದ ಜಪಾನೀಸ್ ಆವೃತ್ತಿಯು ಜೂನ್ ಮತ್ತು ಆಗಸ್ಟ್ ನಡುವೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಲ್ಯಾಟಿನ್ ಅಮೆರಿಕ ಮತ್ತು ತೈವಾನ್ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಕಿರಣ್ರಾಜ್ ಬಹಿರಂಗಪಡಿಸಿದ್ದಾರೆ.
ಚಿತ್ರದಲ್ಲಿ ನಟಿ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಶಾರ್ವರಿ ಮತ್ತು ಬಾಬಿ ಸಿಂಹ ನಟಿಸಿದ್ದಾರೆ. ಚಿತ್ರಕ್ಕೆ ನೋಬಿನ್ ಪಾಲ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


