ತಮಿಳುಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ ಇನ್ನಿಲ್ಲ
ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ (69) ಅವರು ಬುಧವಾರ ವಿಧಿವಶರಾಗಿದ್ದಾರೆ.

ಚೆನ್ನೈ: ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ (69) ಅವರು ಬುಧವಾರ ವಿಧಿವಶರಾಗಿದ್ದಾರೆ.
ಮನೋಬಾಲ ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ತಿಂಗಳುಗಳಿಂದ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚೆನ್ನೈನ ಸಾಲಿಗ್ರಾಮಂನಲ್ಲಿರುವ ನಿವಾಸದಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.
ಮನೋಬಾರ ಅವರ ನಿಧನಕ್ಕೆ ಕಾಲಿವುಡ್'ನ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಬಣ್ಣದ ಲೋಕದಲ್ಲಿ ಮನೋಬಾಲ ಅವರು ಸಕ್ರಿಯರಾಗಿದ್ದರು. ಈ ಸುದೀರ್ಘ ಪಯಣದಲ್ಲಿ ಅವರು 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
1979ರಲ್ಲಿ ಮನೋಬಾಲ ಅವರು ನಟನೆ ಆರಂಭಿಸಿದರು. ಹಲವು ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯರಾಗಿದ್ದರು. ಅವರು ಮಾಡುತ್ತಿದ್ದ ಕಾಮಿಡಿ ಪಾತ್ರಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದವು. ನಟನೆ ಜೊತೆಗೆ ನಿರ್ದೇಶನದಲ್ಲೂ ಅವರು ಆಸಕ್ತಿ ಬೆಳೆಸಿಕೊಂಡರು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಮನೋಬಾಲ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ಕಾಜಲ್ ಅಗರ್ವಾಲ್ ನಟನೆಯ ‘ಘೋಸ್ಟಿ’ ಸಿನಿಮಾದಲ್ಲಿ.
ಸಿನಿಮಾ ಅಷ್ಟೇ ಅಲ್ಲದೆ, ಕಿರುತೆರೆಯಲ್ಲೂ ಮನೋಬಾಲ ಅವರು ಪ್ರೇಕ್ಷಕರ ಮನಗೆದಿದ್ದರು. ನಟನೆಯ ಜೊತೆಗೆ ಕೆಲವು ಧಾರಾವಾಹಿಗಳಿಗೆ ಅವರು ನಿರ್ದೇಶನ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


