'ಲಾಫಿಂಗ್ ಬುದ್ಧ' ಸಿನಿಮಾದಲ್ಲಿ ದಿಗಂತ್
ಭರತ್ ರಾಜ್ ನಿರ್ದೇಶನದ ಲಾಫಿಂಗ್ ಬುದ್ಧ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ಮಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೇವು.

ಭರತ್ ರಾಜ್ ನಿರ್ದೇಶನದ ಲಾಫಿಂಗ್ ಬುದ್ಧ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ಮಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೇವು.
ಈ ಸಿನಿಮಾಗೆ ಪ್ರಮೋದ್ ಶೆಟ್ಟಿ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮತ್ತೊಂದು ಮುಖ್ಯ ಪಾತ್ರವನ್ನು ತೇಜು ಬೆಳವಾಡಿ ಅವರು ನಿಭಾಯಿಸುತ್ತಿದ್ದಾರೆ. ಟೈಟಲ್ ಗಮನಿಸಿದರೆ, ಇದೊಂದು ಹಾಸ್ಯ ಸಿನಿಮಾ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಸದ್ಯ ಈ ಚಿತ್ರದಲ್ಲಿ ನಟ ದಿಗಂತ್ ಕೂಡ ಅಭಿನಯಿಸುತ್ತಿದ್ದಾರೆ.
ಚಿತ್ರದ ಅಂತಿಮ ಹಂತದ ಚಿತ್ರೀಕರಣದಲ್ಲಿ, ಕಥಾವಸ್ತುವಿಗೆ ಬದಲಾವಣೆಗಳನ್ನು ತರುವಲ್ಲಿ ಪ್ರಮುಖವಾದ ಕಾನ್ ಆರ್ಟಿಸ್ಟ್ ಪಾತ್ರದಲ್ಲಿ ದಿಗಂತ್ ಅವರನ್ನು ನಿರ್ಮಾಪಕರು ಆಯ್ಕೆ ಮಾಡಿದ್ದಾರೆ.
ದಿಗಂತ್ ಪಾತ್ರಕ್ಕಾಗಿ ಬದಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ನಿರ್ದೇಶಕರು ದಿಗಂತ್ ನಟನೆಯ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಲಾಫಿಂಗ್ ಬುದ್ಧನ ಕುರಿತು ಹಿಂದಿನ ಸಂವಾದದಲ್ಲಿ ಮಾತನಾಡಿದ, ನಿರ್ದೇಶಕ ಭರತ್ ರಾಜ್ ಚಿತ್ರವು ನೀರೂರು ಎಂಬ ಕಾಲ್ಪನಿಕ ಪಟ್ಟಣದಲ್ಲಿ ಮಲೆನಾಡಿನ ಸುಂದರವಾದ ಹಿನ್ನೆಲೆಯಲ್ಲಿ ಚಿತ್ರಿಸಲಾಗಿದೆ ಎಂದು ಬಹಿರಂಗಪಡಿಸಿದರು.
ಚಿತ್ರವು ಪ್ರಮೋದ್ ಅವರ ಪಾತ್ರದ ಸುತ್ತ ಸುತ್ತುತ್ತದೆ, ಅವರು ತಮ್ಮ ಹೆಂಡತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಒಂದು ದಿನದ ರಜೆಗಾಗಿ ಅನುಮತಿ ಕೇಳುತ್ತಾರೆ. ಅವನ ಕೋರಿಕೆಯನ್ನು ತಿರಸ್ಕರಿಸಿದಾಗ ಏನಾಗುತ್ತದೆ ಎಂಬುದು ಲಾಫಿಂಗ್ ಬುದ್ಧನ ತಿರುಳು.
ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ವಿಷ್ಣು ವಿಜಯ್ ಅವರು ಲಾಫಿಂಗ್ ಬುದ್ಧ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಂದ್ರಶೇಖರನ್ ಅವರ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನವಿದೆ. ಚಿತ್ರದಲ್ಲಿ ಸುಂದರ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಲಾಫಿಂಗ್ ಬುದ್ಧ ಅಲ್ಲದೆ, ದಿಗಂತ್ ರವಿಚಂದ್ರನ್ ಜೊತೆಗೆ ಗುರುರಾಜ್ ಕುಲಕರ್ಣಿ ಅವರ ದಿ ಜಡ್ಜ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


