ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್ ' ರಿಲೀಸ್ ಡೇಟ್ ಫಿಕ್ಸ್!
ಜೂನ್ ತಿಂಗಳು ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ವಿವಾಹವಿದೆ. ಅದೇ ತಿಂಗಳಲ್ಲಿ ತಮ್ಮ ಎರಡನೆಯ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗಲಿದೆ. ಸೂರಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 23 ರಂದು ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.

ಜೂನ್ ತಿಂಗಳು ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ವಿವಾಹವಿದೆ. ಅದೇ ತಿಂಗಳಲ್ಲಿ ತಮ್ಮ ಎರಡನೆಯ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗಲಿದೆ. ಸೂರಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 23 ರಂದು ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.
ಕೆ ಎಂ ಸುಧೀರ್ ಅವರ ಸ್ಟುಡಿಯೋ 18 ಬ್ಯಾನರ್‌ನಿಂದ ಬ್ಯಾಡ್ ಮ್ಯಾನರ್ಸ್ ನಿರ್ಮಾಣ ಆಗಿದ್ದು, ಜಯಣ್ಣ ಫಿಲಂಸ್ ಕರ್ನಾಟಕದಾದ್ಯಂತ ಚಿತ್ರವನ್ನು ವಿತರಿಸಲಿದೆ. ಜಾಕಿ, ಟಗರು ಚಿತ್ರಗಳ ನಿರ್ದೇಶಕ ಸೂರಿ ಮತ್ತು ಅಭಿಷೇಕ್ ಒಂದಾಗಿದ್ದಾರೆ.
ಬ್ಯಾಡ್ ಮ್ಯಾನರ್ಸ್ ಸಿನಿಮಾಗಾಗಿ ಅಭಿಷೇಕ್ ತನ್ನದೇ ಆದ ಸಿದ್ಧತೆಗಳನ್ನು ಮಾಡಿದ್ದಾರೆ, ತನ್ನ ಪಾತ್ರಕ್ಕಾಗಿ ಬದಲಾವಣೆ ಮಾಡಿಕೊಂಡರು, ಅವರು ತೆಗೆದುಕೊಂಡ ಶ್ರಮ ಬಹಳ ಆಸಕ್ತಿದಾಯಕವಾಗಿತ್ತು ಎಂದು ಸೂರಿ ಹೇಳಿದ್ದಾರೆ. ಈ ಚಿತ್ರದಲ್ಲಿ ಅಭಿಷೇಕ್ ಕಮರ್ಷಿಯಲ್ ಸಿನಿಮಾದ ಸಮರ್ಥ ನಾಯಕನಾಗಿ ಹೊರಹೊಮ್ಮುತ್ತಾರೆ ಎಂದು ಅವರು ಹೇಳಿದರು.
ಚಿತ್ರವು ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ತಮ್ಮ ಪೂರ್ಣ ಪ್ರಮಾಣದ ಪ್ರಚಾರವನ್ನು ಪ್ರಾರಂಭಿಸಲು ಚಿತ್ರತಂಡ ಸಜ್ಜಾಗಿದೆ. ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾ ಕುಮಾರ್ ಚೊಚ್ಚಲ ಚಿತ್ರವಾಗಿದೆ. ಚರಣ್ ರಾಜ್ ಅವರ ಸಂಗೀತ ಮತ್ತು ಶೇಖರ್ ಎಸ್ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


