ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ಹಾಡು: ರಾಜ್ ಬಿ ಶೆಟ್ಟಿ
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಸದ್ಯ ಚಿತ್ರತಂಡ ಸಿನಿಮಾದ 'ಮೆಲ್ಲಗೆ' ಶೀರ್ಷಿಕೆಯ ಹಾಡೊಂದನ್ನು ಬಿಡುಗಡೆ ಮಾಡಿದೆ. ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆಯಾದ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ರಾಜ್ ಬಿ ಶೆಟ್ಟಿಯವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಚಿತ್ರವು ನವೆಂಬರ್ 24 ರಂದು ಕೆಆರ್ಜಿ ಸ್ಟುಡಿಯೋಸ್ ಅಡಿಯಲ್ಲಿ ಬಿಡುಗಡೆಯಾಗಲಿದೆ. ರಾಜ್ ಬಿ ಶೆಟ್ಟಿಗೆ ಜೋಡಿಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.
'ಮೆಲ್ಲಗೆ' ಹಾಡಿನ ಸಾಹಿತ್ಯವನ್ನು ಪೃಥ್ವಿ ಬರೆದಿದ್ದು, ಮಿಧುನ್ ಮುಕುಂದನ್ ಸಂಗೀತ ಸಂಯೋಜನೆ ಇದೆ. ಮಾಧುರಿ ಶೇಷಾದ್ರಿ ತಮ್ಮ ಧ್ವನಿ ನೀಡಿದ್ದಾರೆ. ಇದೊಂದು ಮೆಲೋಡಿ ಟ್ರ್ಯಾಕ್ ಆಗಿದ್ದು, ಪ್ರೇಮದ ಬಗೆಗಿನ ಮಹಿಳೆಯ ದೃಷ್ಟಿಕೋನದ ಬಗ್ಗೆ ಒಂದು ಅನನ್ಯ ಒಳನೋಟವನ್ನು ನೀಡುತ್ತದೆ. ಅದಕ್ಕಾಗಿಯೇ ಅವರು ಪೃಥ್ವಿಯನ್ನು ಗೀತರಚನೆಕಾರರಾಗಿ ಆಯ್ಕೆ ಮಾಡಿದ್ದಾಗಿ ರಾಜ್ ವಿವರಿಸುತ್ತಾರೆ.
'ನಾನು ಆಕೆಯ ಅನನ್ಯ ದೃಷ್ಟಿಕೋನವನ್ನು ಬಯಸುತ್ತೇನೆ' ಎನ್ನುವ ರಾಜ್, ಮಿಧುನ್ ಮುಕುಂದನ್ ಅವರ ಕೆಲಸದ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಸಿರಿ ರವಿಕುಮಾರ್ ಕೂಡ ಈ ಹಾಡಿನ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ನವೆಂಬರ್ 24ಕ್ಕೆ 'ಸ್ವಾತಿ ಮುತ್ತಿನ ಮಳೆ ಹನಿಯೇ' ತೆರೆಗೆ
ಚಿತ್ರದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ, ರೇಖಾ ಕೂಡ್ಲಿಗಿ, ತೂಮಿನಾಡು ಮತ್ತು ಸ್ನೇಹಾ ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರವೀಣ್ ಶ್ರೀಯಾನ್ ಸಿನಿಮಾಟೋಗ್ರಾಫರ್ ಮತ್ತು ಸಂಕನಲಕಾರರಾಗಿ ಎರಡು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


