ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ಗೆ ನೋಟಿಸ್ ಜಾರಿ
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಆರ್'ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್'ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ (Dog) ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.
ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಎರಡನ್ನು ಕಟ್ಟಲಾಗಿತ್ತು. ಒಂದು ನಾಯಿ ದಾಳಿ ನಡೆಸಿದೆ ಎಂದು ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


