ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ.

ಬೆಂಗಳೂರು: ನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ.
ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಅಪಘಾತ ಸಂಭವಿಸಿತ್ತು. ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.
ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.
ಪ್ರೇಮಾ ಹಾಗೂ ಕೃಷ್ಣ ಅವರು ಪಾದಾಚಾರಿ ಮಾರ್ಗದಿಂದ ನೇರ ರಸ್ತೆಗೆ ಇಳಿದಿದ್ದರು ಎಂದು ಹೇಳಿಕೆ ನೀಡಿದ್ದರು. ಏಕಾಏಕಿ ಕಾರಿಗೆ ಅಡ್ಡಲಾಗಿ ಬಂದ ಕಾರಣ ಕಾರ್ ಕಂಟ್ರೋಲ್ ಸಿಗದೆ ಆ್ಯಕ್ಸಿಡೆಂಟ್ ಅಗಿದೆ ಎಂದು ನಾಗಭೂಷಣ್ ಹೇಳಿಕೆ ನೀಡಿದ್ದರು. ಆದರೆ, ಕೃಷ್ಣ ಅವರ ಹೇಳಿಕೆಯಲ್ಲಿ ಎಲ್ಲವೂ ಉಲ್ಟಾ ಆಗಿದೆ.
ವೇಗವಾಗಿ ಬಂದ ಕಾರು ಫುಟ್ಪಾತ್ ಮೇಲೆ ಹೋಗುತಿದ್ದ ನಾನು ಮತ್ತ ನನ್ನ ಪತ್ನಿ ಪ್ರೇಮ ಅವರಿಗೆ ಡಿಕ್ಕಿ ಯಾಗಿತ್ತು ಎಂದು ಕೃಷ್ಣ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


