ಮುಮ್ಮಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿ ಕನ್ನಡ ನಟ ಆರ್ಯನ್ ಸಂತೋಷ್ ನಟನೆ!
ಇತ್ತೀಚೆಗೆ ಮಲಯಾಳಂನಲ್ಲಿ ದಿಲೀಪ್ ಅಭಿನಯದ ಬಾಂದ್ರಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಕನ್ನಡ ನಟ ಆರ್ಯನ್ ಸಂತೋಷ್, ಹಿರಿಯ ನಟ ಮಮ್ಮುಟ್ಟಿ ಅವರ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಮಲಯಾಳಂನಲ್ಲಿ ದಿಲೀಪ್ ಅಭಿನಯದ ಬಾಂದ್ರಾ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಕನ್ನಡ ನಟ ಆರ್ಯನ್ ಸಂತೋಷ್, ಹಿರಿಯ ನಟ ಮಮ್ಮುಟ್ಟಿ ಅವರ ಮುಂದಿನ ಚಿತ್ರಕ್ಕಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ ಈ ಸಂಬಂಧ ಇದುವರೆಗೂ ನಟ ಅರ್ಯನ್ ಸಂತೋಷ್ ಎಲ್ಲಿಯೂ ವಿವರಗಳ ಬಗ್ಗೆ ಮಾಹಿತಿ ನೀಡಿಲ್ಲ. ಬಾಂದ್ರಾದಲ್ಲಿ, ಆರ್ಯನ್ ಸಂಜಯ್ ಭಟ್ ಎಂಬ ಉತ್ತರ ಭಾರತದ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ.
ಈ ಚಿತ್ರವು ಮಲಯಾಳಂ ಮತ್ತು ಕನ್ನಡದಲ್ಲಿ ಅವರಿಗೆ ಮತ್ತಷ್ಟು ಹೆಚ್ಚಿನ ಅವಕಾಶಗಳಿಗೆ ಬಾಗಿಲು ತೆರೆಯುತ್ತದೆ ಎಂದು ನಂಬಿದ್ದಾರೆ. ಅವರ ಮುಂದಿನ ಕನ್ನಡ ಪ್ರಾಜೆಕ್ಟ್, ಭವಾನಿ ಫೈಲ್ಸ್ ಸಿನಿಮಾಗೆ ಅವರು ಚಿತ್ರಕಥೆ ಬರೆದಿದ್ದಾರೆ, ಇದನ್ನು ಮಲಯಾಳಂನಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲು ಸಿದ್ಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


