ಹಿರಿಯ ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್ ದಂಪತಿ
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಂಗಳವಾರ...

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಂಗಳವಾರ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಇಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ದಂಪತಿ, ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್ ಅವರಿಗೆ ಧೈರ್ಯ ತುಂಬಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ‘ಅಮ್ಮ ನನ್ನ ಧ್ವನಿ ಕಂಡು ಹಿಡಿದರು. ಈ ವಯಸ್ಸಿನಲ್ಲಿಯೂ ಅವರು ನೋವನ್ನು ಸಹಿಸಿಕೊಂಡು ಇರುವ ಶಕ್ತಿ ಇದೆಯಲ್ಲ ಅದು ಸಾಮಾನ್ಯದ್ದಲ್ಲ. ಯೋಗ ಪುರುಷರು ಅನ್ನುತ್ತಾರಲ್ಲ ಹಾಗೆ. ಈಗಲೂ ಅವರು ಸ್ಟ್ರಾಂಗ್ ಆಗಿದ್ದಾರೆ. ಆಗಿನ ಕಾಲದವರು ಅವರು, ಒಳ್ಳೆಯ ಮನಸ್ಸಿರುವವರು, ಒಳ್ಳೆಯ ವ್ಯಕ್ತಿ. ನಾವು ಅವರನ್ನು ಇಷ್ಟೋಂದು ಪ್ರೀತಿಸಲು ಅದೇ ಕಾರಣ’ ಎಂದರು.
ಮನೆಗೆ ಆಗಮಿಸಿದ್ದ ಶಿವರಾಜ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿನೋದ್ ರಾಜ್ ಅವರು, ಅಮ್ಮನ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಿವಣ್ಣ ಮತ್ತು ವಿನೋದ್ ರಾಜ್ ತಬ್ಬಿಕೊಂಡು ಭಾವುಕ ಕ್ಷಣಕ್ಕೆ ಸಾಕ್ಷಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


