ಮನಸಲ್ಲೊಂದು ಹೊರಗೊಂದು ಇರುವುದು ನನಗೆ ಬರಲ್ಲ; ನನ್ನ ಕೆಲವು ಪ್ರಶ್ನೆಗಳಿಗೆ ದರ್ಶನ್ ಉತ್ತರ ನೀಡಬೇಕು: ಮೌನ ಮುರಿದ ಧ್ರುವ ಸರ್ಜಾ
ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ.

ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ದರ್ಶನ್ ಬಳಿ ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಇದ್ದು, ಅದನ್ನು ಅವರ ಬಳಿಯೇ ಕೇಳಬೇಕಿದೆ ಎಂದಿದ್ದಾರೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳ ನಡುವೆ ಬರ್ತ್‌ಡೇ ಆಚರಿಸಿಕೊಂಡರು. ಅವರ ಮನೆಯ ಮುಂದೆ ಸೇರಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಧ್ರುವ ಸರ್ಜಾ, ದರ್ಶನ್ ಹಾಗೂ ತಮ್ಮ ನಡುವಿನ ಮನಸ್ತಾಪದ ಬಗ್ಗೆ ಮಾತನಾಡಿದರು. ದರ್ಶನ್ ಅವರು ಹಿರಿಯ ನಟ, ಸೀನಿಯರ್ ಕೂಡ. ದರ್ಶನ್ ಅವರ ಉಪಸ್ಥಿತಿ ಮತ್ತು ಅನುಪಸ್ಥಿತಿಯಲ್ಲೂ ಅದೇ ಮರ್ಯಾದೆ ಇರುತ್ತೆ. ಅದರೆ ಅವರ ಬಗ್ಗೆ ಕೇಳಲು ಕೆಲವು ಪ್ರಶ್ನೆಗಳಿವೆ. ಅವುಗಳನ್ನು ಅವರ ಬಳಿಯೇ ಕೇಳಬೇಕು ಎಂದಿದ್ದಾರೆ.
ನನಗೂ ಸ್ವಾಭಿಮಾನ ಇದೆ, ನಾನು ಅವರೊಟ್ಟಿಗೆ ಈ ವಿಚಾರವಾಗಿ ಮಾತನಾಡುತ್ತೇನೆ. ಕೆಲವರು ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಇಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಹೇಳುವುದು ಇಷ್ಟೇ, ನನ್ನಲ್ಲಿರುವ ಕೆಲವು ಗೊಂದಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕು. ನಾಟಕೀಯವಾಗಿ ಮನಸಲ್ಲೊಂದು ಹೊರಗೊಂದು ಥರ ಇರುವುದು ನನಗೆ ಬರುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


