ಲೈಕಾ ಪ್ರೊಡಕ್ಷನ್ ನಿರ್ಮಿಸುತ್ತಿರುವ ನಿಖಿಲ್ ಕುಮಾರ್ ಸಿನಿಮಾದಲ್ಲಿ ದುನಿಯಾ ವಿಜಯ್ ಪಾತ್ರ?
ತಮಿಳಿನ ದುಬಾರಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ ಹೌಸ್, ಮೊದಲ ಬಾರಿಗೆ ಕನ್ನಡ ಸಿನಿಮಾಗೆ ಹಣ ಹೂಡುತ್ತಿದೆ. ತಮ್ಮ ಹೊಸ ಚಿತ್ರಕ್ಕೆ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡಿದೆ.

ತಮಿಳಿನ ದುಬಾರಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ ಹೌಸ್, ಮೊದಲ ಬಾರಿಗೆ ಕನ್ನಡ ಸಿನಿಮಾಗೆ ಹಣ ಹೂಡುತ್ತಿದೆ. ತಮ್ಮ ಹೊಸ ಚಿತ್ರಕ್ಕೆ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದು ಕೂಡ ಭಾರೀ ಬಜೆಟ್ ಸಿನಿಮಾವಾಗಿದೆ.
ಪ್ರಮುಖ ಪಾತ್ರವರ್ಗದಲ್ಲಿ ಯುಕ್ತಿ ಥರೇಜಾ (ರಂಗಬಲಿ) ಮತ್ತು ಕೋಮಲ್ ಕುಮಾರ್ ಇದ್ದಾರೆ, ನಿರ್ಮಾಣ ಸಂಸ್ಥೆಯು ಪ್ರಮುಖ ಪಾತ್ರಕ್ಕಾಗಿ ನಟ ವಿಜಯ್ ಕುಮಾರ್ ಅವರನ್ನು ಸಂಪರ್ಕಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗುತ್ತಿರುವ ಈ ದ್ವಿಭಾಷಾ ಚಿತ್ರದಲ್ಲಿ ವಿಜಯ್ ಕುಮಾರ್ ಪಾತ್ರವೇನು ಎಂಬ ಬಗ್ಗೆ ಎಲ್ಲರ ಗಮನ ಸೆಳೆಯುತ್ತಿದೆ. ವಿಜಯ್ ಅವರಿಗೆ ಯಾವ ರೀತಿಯ ಪಾತ್ರ ನಿರ್ವಹಿಸಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ದುನಿಯಾ ವಿಜಯ್ ಪಾತ್ರವೇನು ಎಂಬುದರ ಬಗ್ಗೆ ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ಪ್ರೊಡಕ್ಷನ್ ಹೌಸ್ ಬಹಿರಂಗಪಡಿಸುವ ನಿರೀಕ್ಷೆಯಿದೆ.
ನಿರ್ದೇಶಕ ಲಕ್ಷ್ಮಣ್ ಅವರ (ಬೋಗನ್, ಭೂಮಿ, ರೋಮಿಯೋ ಮತ್ತು ಜೂಲಿಯೆಟ್) ಕನ್ನಡದ ಚೊಚ್ಚಲ ಚಿತ್ರವಾಗಿದೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ, ಬರೆದಿದ್ದಾರೆ.
ಅಜನೀಶ್ ಲೋಕನಾಥ್ ಸಂಗೀತ ಮತ್ತು ವಂಶಿ ಪಚ್ಚಿಪುಲುಸು ಛಾಯಾಗ್ರಹಣ ಮಾಡಲಿದ್ದಾರೆ. ಏತನ್ಮಧ್ಯೆ, ವಿಜಯ್ ಕುಮಾರ್ ಅವರು ತಮ್ಮ ಎರಡನೇ ನಿರ್ದೇಶನದ ಭೀಮಾ ಸಿನಿಮಾ ನವೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


