ಸಿನಿಮಾ ಸುದ್ದಿ

ರಾಮೋಹಳ್ಳಿ ಪೊಲೀಸರಿಂದ ವರ್ತೂರು ಸಂತೋಷ್ ಅರೆಸ್ಟ್: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು!

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧಿಸಲಾಗಿದೆ.

ರಾಮೋಹಳ್ಳಿ ಪೊಲೀಸರಿಂದ ವರ್ತೂರು ಸಂತೋಷ್ ಅರೆಸ್ಟ್: ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಇದೇ ಮೊದಲು!
ವರ್ತೂರು ಸಂತೋಷ್
Published On :

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ  ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬರನ್ನ ಬಂಧಿಸಲಾಗಿದೆ.

ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪ ಮೇಲೆ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ.

ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು. ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು  ವಿಚಾರಣೆ ನಡೆಸುತ್ತಿದ್ದಾರೆ.

ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್​ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ.

ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ದೃಶ್ಯವನ್ನು ಗಮನಿಸಿ ಕ್ರಮ ಕೈಗೊಳ್ಳಲಾಗಿದೆ. ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದೆ. ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ಬೆಂಗಳೂರು ಅರಣ್ಯ ಸಂರಕ್ಷಣಾ ಅಧಿಕಾರಿ ರವೀಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.