ಮತ್ತೆ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ನಟ ಕಿಶೋರ್; ಗನ್ಸ್ ಅಂಡ್ ರೋಸಸ್ ಚಿತ್ರತಂಡ ಸೇರ್ಪಡೆ!
ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ. ಎಚ್ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ.
ಎಚ್ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕಿಶೋರ್ ಅವರು ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರತಂಡ ಅದರ ಕೆಲವು ಫೋಟೊಗಳನ್ನು ಹಂಚಿಕೊಂಡಿದೆ.
ಎಚ್ಆರ್ ನಟರಾಜ್ ಈ ಯೋಜನೆಗೆ ಬಂಡವಾಳ ಹೂಡುತ್ತಿದ್ದು, ಶರತ್ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರವು ಇತ್ತೀಚೆಗಷ್ಟೇ ಪ್ರಾರಂಭವಾದರೂ, ಈಗಾಗಲೇ ಚಿತ್ರೀಕರಣ ಅಂತಿಮ ಹಂತ ತಲುಪಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.
ಗನ್ಸ್ ಅಂಡ್ ರೋಸಸ್ ಚಿತ್ರಕ್ಕೆ ಶಶಿಕುಮಾರ್ ಅವರ ಸಂಗೀತ ಸಂಯೋಜನೆ, ಜನಾರ್ಧನ್ ಅವರ ಛಾಯಾಗ್ರಹಣ ಮತ್ತು ಸಂಜೀವ್ ರೆಡ್ಡಿ ಅವರ ಸಂಕಲನವಿದೆ. ಚಿತ್ರವು ಗ್ರಾಮೀಣ ಭಾಗದ ಅಂಶಗಳೊಂದಿಗೆ ತುಂಬಿದ ರೋಮ್ಯಾಂಟಿಕ್ ಎಂಟರ್ಟೈನರ್ ಆಗಿದೆ.
ಯಶಿಕಾ ನಿಷ್ಕಲ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಶೋಭರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವತ್ಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮತ್ತು ಡೈಮಂಡ್ ರಾಜಣ್ಣ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


