ಫಿಲ್ಮ್ ಆ್ಯಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಅಧ್ಯಕ್ಷರಾಗಿ ನಟ ಮಾಧವನ್ ನೇಮಕ
ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಫ್ ಟಿಐಐ )ದ ಅಧ್ಯಕ್ಷರಾಗಿ ಮತ್ತು ಅದರ ಆಡಳಿತ ಮಂಡಳಿಯ ಚೇರಮನ್ ಆಗಿ ನಟ-ನಿರ್ಮಾಪಕ ಆರ್ ಮಾಧವನ್ ಅವರು ಶುಕ್ರವಾರ ನಾಮನಿರ್ದೇಶನಗೊಂಡಿದ್ದಾರೆ.

ಪುಣೆ: ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಫ್ ಟಿಐಐ )ದ ಅಧ್ಯಕ್ಷರಾಗಿ ಮತ್ತು ಅದರ ಆಡಳಿತ ಮಂಡಳಿಯ ಚೇರಮನ್ ಆಗಿ ನಟ-ನಿರ್ಮಾಪಕ ಆರ್ ಮಾಧವನ್ ಅವರು ಶುಕ್ರವಾರ ನಾಮನಿರ್ದೇಶನಗೊಂಡಿದ್ದಾರೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಹಿಂದೆ ಟ್ವೀಟ್ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದು, ಮಾಧವನ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
"ಎಫ್ ಟಿಐಐ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ಮಾಧವನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಮತ್ತು ಬಲವಾದ ನೈತಿಕತೆಯು ಈ ಸಂಸ್ಥೆಯನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ. ಪಾಸಿಟಿವ್ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ನನಗೆ ಖಾತ್ರಿಯಿದೆ. ನಿಮಗೆ ನನ್ನ ಶುಭಾಶಯಗಳು" ಎಂದು ಕೇಂದ್ರ ಸಚಿವರು ಟ್ವೀಟ್ ಮಾಡಿದ್ದಾರೆ.
ಇನ್ನು ತಮಗೆ ಶುಭಾಶಯ ಕೋರಿದ ಸಚಿವರಿಗೆ ಧನ್ಯವಾದ ಹೇಳಿದ ಮಾಧವನ್ ಅವರು, "ಅನುರಾಗ್ ಠಾಕೂರ್ ಜೀ ಅವರಿಗೆ ತುಂಬಾ ಧನ್ಯವಾದಗಳು. ಎಲ್ಲಾ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


