'ಹುಲಿ ನಾಯಕ' ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ನಟ ಕಿಚ್ಚ ಸುದೀಪ್!
ಡಿಜೆ ಚಕ್ರವರ್ತಿ ಅವರ ಮುಂಬರುವ ಚಿತ್ರದ ಶೀರ್ಷಿಕೆಯನ್ನು ಉಪೇಂದ್ರ ಅವರು ಅನಾವರಣಗೊಳಿಸಿದರು. ಏಳು ವರ್ಷಗಳ ನಂತರ ಚಕ್ರವರ್ತಿ ನಿರ್ದೇಶನಕ್ಕೆ ಮರಳುತ್ತಿದ್ದು, 'ಹುಲಿ ನಾಯಕ' ಚಿತ್ರದ ಮೋಷನ್ ಪೋಸ್ಟರ್ ಅನ್ನು ನಟ ಸುದೀಪ್ ಅವರು ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.

ಡಿಜೆ ಚಕ್ರವರ್ತಿ ಅವರ ಮುಂಬರುವ ಚಿತ್ರದ ಶೀರ್ಷಿಕೆಯನ್ನು ಉಪೇಂದ್ರ ಅವರು ಅನಾವರಣಗೊಳಿಸಿದರು. ಏಳು ವರ್ಷಗಳ ನಂತರ ಚಕ್ರವರ್ತಿ ನಿರ್ದೇಶನಕ್ಕೆ ಮರಳುತ್ತಿದ್ದು, 'ಹುಲಿ ನಾಯಕ' ಚಿತ್ರದ ಮೋಷನ್ ಪೋಸ್ಟರ್ ಅನ್ನು ನಟ ಸುದೀಪ್ ಅವರು ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆ ಮಾಡಿದರು. ನಿರ್ದೇಶಕರ ದೃಷ್ಟಿಕೋನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸುದೀಪ್, ಹುಲಿ ನಾಯಕ ತಂಡಕ್ಕೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಸುದೀಪ್ ಅವರಲ್ಲದೆ, ನಟರಾದ ಧನಂಜಯ್, ಪ್ರೇಮ್, ಅನುಪ್ ಭಂಡಾರಿ, ವಸಿಷ್ಠ ಸಿಂಹ, ಪೂಜಾ ಗಾಂಧಿ ಮತ್ತು ಸಂಜನಾ ಗಲ್ರಾನಿ ಭಾಗವಹಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರ ಸಿಂಧೂರು ಲಕ್ಷ್ಮಣ ನಾಯ್ಕ ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಿದರು.

ಚಿತ್ರವೊಂದರ ವಿಚಾರವಾಗಿ ನಟ ಸುದೀಪ್ ಅವರನ್ನು ಭೇಟಿ ಮಾಡಲೆಂದು ಬೆಂಗಳೂರಿಗೆ ಬಂದಿದ್ದ ನಟ-ನಿರ್ದೇಶಕ ಚೇರನ್ ಅವರು 'ಹುಲಿ ನಾಯಕ' ಚಿತ್ರದ ಮೋಷನ್ ಪೋಸ್ಟರ್‌ಗೆ ಮೆಚ್ಚುಗೆ ಸೂಚಿಸಿದರು ಮತ್ತು ಸಿಂಧೂರು ಲಕ್ಷ್ಮಣ ನಾಯಕ ಕುಟುಂಬಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಮಂಜುನಾಥ್ ಡಿ ಅವರ ಮಯೂರ ಮೋಷನ್ ಪಿಕ್ಚರ್ಸ್ ನಿರ್ಮಿಸಿರುವ ಹುಲಿ ನಾಯಕ ಸಿನಿಮಾದಲ್ಲಿ ಮಿಲಿಂದ್ ಗೌತಮ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ 'ಅನ್‌ಲಾಕ್ ರಾಘವ' ಚಿತ್ರದ ಮೂಲಕ ಪದಾರ್ಪಣೆ ಮಾಡುತ್ತಿರುವ ಮಿಲಿಂದ್, ಏಕಕಾಲದಲ್ಲಿ ಚಿಕ್ರೀಕರಣವನ್ನು ಆರಂಭಿಸಲು ಸಜ್ಜಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


