ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ: ಪ್ರಕಾಶ್ ರೈ
ತಮಿಳುನಾಡು ಸಚಿವ ದಯಾನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ,‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ’ ಎಂದು ಬಹುಭಾಷಾ ನಟ...

ಬೆಂಗಳೂರು: ತಮಿಳುನಾಡು ಸಚಿವ ದಯಾನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ,‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ’ ಎಂದು ಬಹುಭಾಷಾ ನಟ ಪ್ರಕಾಶ್ ರೈ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದ ಟೌನ್ ಹಾಲ್ನಲ್ಲಿ ನಡೆದ ಗೌರಿನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ನಟ, ನಾನು ಟ್ವಿಟರ್ನಲ್ಲಿ ‘ಸನಾತನಿ ಸಂಸತ್’ ಎಂದು ಪೋಸ್ಟ್ ಮಾಡಿದ್ದೆ. ಅದಕ್ಕೆ, ‘ನಿನ್ನದು ಸನಾತನ ಧರ್ಮ ಅಲ್ವಾ’ ಎಂದು ಒಬ್ಬ ಪ್ರಶ್ನೆ ಕೇಳಿದ. ಅದಕ್ಕೆ ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ. ನನ್ನ ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ ಎಂದು ಉತ್ತರಿಸಿರುವುದಾಗಿ ಹೇಳಿದರು.
ನಾನು ಯಾವುದೇ ಧರ್ಮದ ವಿರುದ್ಧ ಇಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದ್ದೇನೆ. ಅವರು ಸಂಸತ್ ಭವನದ ಉದ್ಘಾಟನೆ ವೇಳೆ ಹೋಮ ಹವನ ಮಾಡಿಸಿದರು. ಅದು ನಮ್ಮ ಸಂಸತ್ ಭವನ. ಅದರಲ್ಲಿ ಹೋಮ ಹವನ ಮಾಡಬಾರದು. ಯಾವುದನ್ನೂ ಸಹ ನಮ್ಮ ಮೇಲೆ ಬಲವಂತವಾಗಿ ಹೇರಬಾರದು. ಆದರೆ, ಮೋದಿಯಿಂದ ಅದು ಆಗುತ್ತಿದೆ, ಅದಕ್ಕೆ ನನ್ನ ವಿರೋಧವಿದೆ ಎಂದು ಪ್ರಕಾಶ್ ರೈ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


