ಬಹುಭಾಷಾ 'ಭೀಮಾ ಕೋರೆಗಾಂವ್' ಚಿತ್ರಕ್ಕೆ ನಾಗಶೇಖರ್ ಡೈರೆಕ್ಷನ್!
ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ನಿರ್ದೇಶಕ ನಾಗಶೇಖರ್ ಅವರು, ನಟ ಶ್ರೀನಗರ ಕಿಟ್ಟಿ-ರಚಿತಾ ರಾಮ್ ನಟನೆಯ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಇದೀಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿರುವ ನಿರ್ದೇಶಕ ನಾಗಶೇಖರ್ ಅವರು, ನಟ ಶ್ರೀನಗರ ಕಿಟ್ಟಿ-ರಚಿತಾ ರಾಮ್ ನಟನೆಯ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಇದೀಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.
ಚಿತ್ರದ ಕುರಿತು ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತ ಘೋಷಣೆ ಮಾಡಲಾಯಿತು. ಚಿತ್ರಕ್ಕೆ ಭೀಮಾ ಕೋರೆಗಾಂವ್ ಎಂಬ ಶೀರ್ಷಿಕೆಯನ್ನು ನೀಡಲಾಗಿದ್ದು, ಚಿತ್ರವನ್ನು ಛಲವಾದಿ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ.
ಚಿತ್ರದ ಕಥಾಹಂದರವು 1818 ರಲ್ಲಿ ಪುಣೆಯ ಭೀಮಾ ಕೋರೆಗಾಂವ್‌ನಲ್ಲಿ ನಡೆದ ನೈಜ ಕಥೆಯನ್ನಾಧಾರಿಸಿದೆ. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಪೇಶ್ವೆಗಳ ನಡುವೆ ಭೀಮಾ ಕೋರೆಗಾಂವ್ ನಲ್ಲಿ ಜನವರಿ 1, 1818ರಲ್ಲಿ ಐತಿಹಾಸಿಕ ಯುದ್ದ ನಡೆದಿತ್ತು. ಈ ವೇಳೆ ಐನೂರು ಮಂದಿ ದಲಿತ ಹೋರಾಟಗಾರರು ಆಹಾರ, ನೀರು ಹಾಗೂ ವಿಶ್ರಾಂತಿ ಇಲ್ಲದೆ ಇಪ್ಪತ್ತೆಂಟು ಸಾವಿರ ಮಂದಿ ಇದ್ದ ಸೈನ್ಯದ ವಿರುದ್ಧ ನಿರಂತರ ಹನ್ನೆರಡು ಗಂಟೆ ಕಾದಾಡಿದ ಸ್ಮರಣೀಯ ಕದನ ಅದು. ಪೇಶ್ವೆಗಳ ಇಪ್ಪತ್ತೆಂಟು ಸಾವಿರ ಸೈನ್ಯ ಬಲವನ್ನು ಸೋಲಿಸಿದ್ದರು. ಈ ಕಥೆಯನ್ನಾಧರಿಸಿ ಚಿತ್ರ ನಿರ್ಮಿಸಲಾಗುತ್ತಿದೆ.
ಭೀಮಾ ಕೋರೆಗಾಂವ್ ಚಿತ್ರ ಕಥೆಯನ್ನು ಡಿಜೆ ಚಕ್ರವರ್ತಿ ಜೊತೆಗೆ ಸಂಜು ಕಾಟ್ಕರ್ ಬರೆದಿದ್ದು, ಚಿತ್ರವನ್ನು ಬಹುಭಾಷೆಗಳಲ್ಲಿ ಬಿಡುಗಡೆ ಮಾಡುವ ಗುರಿಯನ್ನು ನಿರ್ಮಾಪಕರು ಹೊಂದಿದ್ದಾರೆ.
ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಾಗಶೇಖರ್ ಅವರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ಸ್ಯಾಂಡಲ್ ವುಡ್'ಗೆ ಕರೆತರುವುದಾಗಿ ಹಾಗೂ ಚಿತ್ರದ ಚಿತ್ರೀಕರಣವನ್ನು ಶೀಘ್ರದಲ್ಲೇ ಪ್ರಾರಂಭಿಸುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


