'ಜಲಂಧರ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ಪ್ರಮೋದ್ ಶೆಟ್ಟಿ
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದಲೇ ಪ್ರೇಕ್ಷಕರ ಮನ ಗೆದ್ದಿರುವ ನಟ ಪ್ರಮೋದ್ ಶೆಟ್ಟಿ. ಪಾತ್ರದಿಂದ ಪಾತ್ರಕ್ಕೆ ಮ್ಯಾನರಿಸಂನ ಚೇಂಜ್ ಮಾಡಿಕೊಳ್ಳುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಚಿತ್ರ ಜಲಂಧರ.

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಪಾತ್ರಗಳಿಂದಲೇ ಪ್ರೇಕ್ಷಕರ ಮನ ಗೆದ್ದಿರುವ ನಟ ಪ್ರಮೋದ್ ಶೆಟ್ಟಿ. ಪಾತ್ರದಿಂದ ಪಾತ್ರಕ್ಕೆ ಮ್ಯಾನರಿಸಂನ ಚೇಂಜ್ ಮಾಡಿಕೊಳ್ಳುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಚಿತ್ರ 'ಜಲಂಧರ'.
ದಿ ಲಾಫಿಂಗ್ ಬುದ್ಧ ಮತ್ತು ಶಹಬ್ಬಾಸ್ ಬಡ್ಡಿ ಮಗನೇ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ, ಜಲಂಧರ ಎಂಬ ಶೀರ್ಷಿಕೆಯ ಎಂಬ ಟೈಟಲ್ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ್ದಾರೆ.
ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಪ್ರಮೋದ್ ಶೆಟ್ಟಿಯವರ ಹುಟ್ಟುಹಬ್ಬಕ್ಕೆ ಈ ಚಿತ್ರದ ಪೋಸ್ಟರ್ ಕೂಡ ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ.
ವಿಷ್ಣು ವಿ ಪ್ರಸನ್ನ ಚೊಚ್ಚಲ ನಿರ್ದೇಶನದ ಈ ಚಿತ್ರ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕಾವೇರಿ ನದಿ ದಡದ ಮಧುವತ್ತಿ ಎಂಬ ಊರಿನಲ್ಲಿ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಲೋಕೇಶ್ 'ಜಲಂಧರ' ಚಿತ್ರಕ್ಕೆ ಕಥೆ ಬರೆದಿದ್ದಾರೆ.
ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ ಮದನ್ ಎಸ್ ನಿರ್ಮಾಣ ಮಾಡುತ್ತಿದ್ದಾರೆ. ಚಂದ್ರ ಮೋಹನ್, ರಾಮಚಂದ್ರ ಹಾಗೂ ಪದ್ಮನಾಭನ್ ಸಹ ನಿರ್ಮಾಪಕರಾಗಿದ್ದಾರೆ. ಮುತ್ತತ್ತಿ, ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅಲ್ಲದೇ ಲೋಕೇಶ್ ಗೌಡ, ರಘು ರಮಣಕೊಪ್ಪ, ಬಾಲ ರಾಜವಾಡಿ, ರಿಶಿಕಾ ರಾಜ್, ಆರೋಹಿತ ಗೌಡ, ನವೀನ್ ಸಾಗರ್, ಪ್ರತಾಪ್ ಮುಂತಾದವರು ಇದ್ದಾರೆ.
ಚಿತ್ರಕ್ಕೆ ಸರಿನ್ ರವೀಂದ್ರನ್ ಹಾಗೂ ವಿದ್ಯಾಶಂಕರ್ ಛಾಯಾಗ್ರಹಣ, ಜತಿನ್ ದರ್ಶನ್ ಸಂಗೀತ ನಿರ್ದೇಶನ ಹಾಗೂ ವೆಂಕಿ ಯು.ಡಿ.ವಿ ಸಂಕಲನವಿದೆ. ಸದ್ಯದಲ್ಲೇ 'ಜಲಂಧರ' ಸಿನಿಮಾದ ಟ್ರೇಲರ್ ಅನ್ನು ಬಿಡುಗಡೆಗೊಳಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


