ಬಲವಂತವಾಗಿ 7 ಬಾರಿ ಗರ್ಭಪಾತ: ರಾಜಕಾರಣಿ ಸೀಮನ್ ವಿರುದ್ಧ ವಿಜಯಲಕ್ಷ್ಮಿಆರೋಪ; ಸ್ತ್ರೀರೋಗ ತಜ್ಞರಿಂದ ಪರೀಕ್ಷೆ
ನಟಿ ವಿಜಯಲಕ್ಷ್ಮೀ ನೀಡಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ), ನಟ ಮತ್ತು ನಿರ್ದೇಶಕ ಸೀಮನ್ ಅವರನ್ನು ಚೆನ್ನೈ ಪೊಲೀಸರು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ.

ಚೆನ್ನೈ: ನಟಿ ವಿಜಯಲಕ್ಷ್ಮೀ ನೀಡಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ನಾಮ್ ತಮಿಳರ್ ಕಟ್ಚಿ (ಎನ್ಟಿಕೆ), ನಟ ಮತ್ತು ನಿರ್ದೇಶಕ ಸೀಮನ್ ಅವರನ್ನು ಚೆನ್ನೈ ಪೊಲೀಸರು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ.
ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ತನಗೆ ಮೋಸ ಮಾಡಿದ್ದಾನೆ ಎಂದು ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮೀ ದೂರು ನೀಡಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಸೀಮನ್ ಅವರಿಗೆ ಸೂಚಿಸಲಾಗಿದ್ದರೂ, ಕಾರಣಾಂತರಗಳಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಸೀಮಾನ್ ನನ್ನನ್ನು ಮದುವೆ ಆಗುವುದಾಗಿ ನಂಬಿಸಿದ್ದ, ಪ್ರೀತಿಸುತ್ತಿರುವಂತೆ ನಾಟಕ ಆಡಿ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ. ಬಲವಂತವಾಗಿ 7 ಬಾರಿ ಗರ್ಭಪಾತ ಮಾಡಿಸಿದ್ಧಾನೆ ಎಂದು ವಿಜಯಲಕ್ಷ್ಮೀ ದೂರು ನೀಡಿದ್ದಾರೆ.
ವಂಚನೆ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ನಿಷೇಧ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸೀಮನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಿಜಯಲಕ್ಷ್ಮಿ ಕೂಡ ಇತ್ತೀಚೆಗೆ ತಿರುವಳ್ಳೂರಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದರು.
ಚೆನ್ನೈ ಪೊಲೀಸರು ವಿಜಯಲಕ್ಷ್ಮೀ ನೀಡಿದ ದೂರಿನ ಆಧಾರದ ಮೇರೆಗೆ ತನಿಖೆ ಆರಂಭಿಸಿದ್ದಾರೆ. ಸೀಮನ್ ವಿಚಾರಣೆಗೆ ಸೂಚಿಸಿರುವುದಲ್ಲದೆ ವಿಜಯಲಕ್ಷ್ಮೀಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತಮಗೆ 7 ಬಾರಿ ಗರ್ಭಪಾತವಾಗಿದೆ ಎಂದು ವಿಜಯಲಕ್ಷ್ಮೀ ಅರೋಪಿಸಿರುವುದರಿಂದ ಶನಿವಾರ 4 ಮಂದಿ ಸ್ತ್ರೀ ರೋಗ ತಜ್ಞರು ವಿಜಯಲಕ್ಷ್ಮೀ ಗರ್ಭಕೋಶಕ್ಕೆ ಅಲ್ಟ್ರಾಸೌಂಡ್ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ತನಿಖೆ ಮುಂದುವರಿದಿದ್ದು, ಸೀಮನ್ ಹೇಳಿಕೆ ಪಡೆಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


