ಸಿನಿಮಾ ಸುದ್ದಿ

'ನಾನು ನಂದಿನಿ ಬೆಂಗಳೂರಿಗೆ ಬಂದೀನಿ'; ರೀಲ್ಸ್​​ ಗೆ ಭಾರೀ ಮೆಚ್ಚುಗೆ; ಒಂದೇ ದಿನ 5 ಮಿಲಿಯನ್​ ವೀಕ್ಷಣೆ!

ಕೆಲ ದಿನಗಳ ಹಿಂದೆ 'ಅನ್ಯಾಯಕಾರಿ ಬ್ರಹ್ಮ ' ರೀಲ್ಸ್ ಮೂಲಕ ಅದರ ಮೂಲ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ನಾಡಿನಾದ್ಯಂತ ಮನೆ ಮಾತಾದರು. ಈಗ 'ನಾನು ನಂದಿನಿ ಬೆಂಗಳೂರಿಗ್ ಬಂದೀನಿ' ಎಂಬ ರೀಲ್ಸ್ ಸಖತ್ ಸೌಂಡ್ ಮಾಡುತ್ತಿದೆ.

'ನಾನು ನಂದಿನಿ ಬೆಂಗಳೂರಿಗೆ ಬಂದೀನಿ'; ರೀಲ್ಸ್​​ ಗೆ ಭಾರೀ ಮೆಚ್ಚುಗೆ; ಒಂದೇ ದಿನ 5 ಮಿಲಿಯನ್​ ವೀಕ್ಷಣೆ!
ನಾನು ನಂದಿನಿ ರೀಲ್ಸ್ ನಲ್ಲಿ ವಿಕಾಸ್
Published On :

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ರೀಲ್ಸ್ ಗಳು ಇದಕ್ಕಿದ್ದಂತೆ ವೈರಲ್ ಆಗುವ ಮೂಲಕ ಹಲವು ಕಲಾವಿದರು ರಾತ್ರೋ ರಾತ್ರಿ ಪ್ರಸಿದ್ಧರಾಗುತ್ತಾರೆ. ಕೆಲ ದಿನಗಳ ಹಿಂದೆ 'ಅನ್ಯಾಯಕಾರಿ ಬ್ರಹ್ಮ ' ರೀಲ್ಸ್ ಮೂಲಕ ಅದರ ಮೂಲ ಗಾಯಕ  ಮಳವಳ್ಳಿ ಮಹಾದೇವಸ್ವಾಮಿ ನಾಡಿನಾದ್ಯಂತ ಮನೆ ಮಾತಾದರು. ಈಗ 'ನಾನು ನಂದಿನಿ ಬೆಂಗಳೂರಿಗ್ ಬಂದೀನಿ' ಎಂಬ ರೀಲ್ಸ್ ಸಖತ್ ಸೌಂಡ್ ಮಾಡುತ್ತಿದೆ. 

'ನಾನು ನಂದಿನಿ ಬೆಂಗಳೂರಿಗ್ ಬಂದೀನಿ. ಪಿಜಿಲಿ ಇರ್ತೀನಿ ಐಟಿ ಕೆಲಸ ಮಾಡ್ತೀನಿ. ಊಟ ಸರಿ ಇಲ್ಲ ಅಂದ್ರೂನೂ ತಿಂತೀನಿ. ಬಂದಿದ್ ದುಡ್ ಎಲ್ಲಾ ಮನೇಗ್​ ಕಳಸ್ತೀನಿ. ಬಾರೇ ನಂದಿನಿ ಗೋಬಿ ತಿನ್ನಸ್ತೀನಿ. ಬಾರೇ ನಂದಿನಿ ಬೆಂಗಳೂರ್ ತೋರಸ್ತೀನಿ. ಬಾರೆ ನಂದಿನಿ ಪೇಢಾ ತಿನ್ನಸ್ತೀನಿ. ಬಾರೇ ನಂದಿನಿ ಪಿಚ್ಚರ್ ತೋರಸ್ತೀನಿ ಎನ್ನುವ ವಿಕಿ ಪೀಡಿಯಾ ವಿಕಾಸ್ ಅವರ ರೀಲ್ಸ್ ಗೆ ಜನಾ ಫಿದಾ ಆಗಿದ್ದಾರೆ. 

ಒಂದು ದಿನದ ಹಿಂದೆಯಷ್ಟೇ ಫೇಸ್​ಬುಕ್​ನಲ್ಲಿ ಮತ್ತು ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಲಕ್ಷಾಂತರ ಜನರು ಲೈಕ್ ಮಾಡಿದ್ದು ಸಾವಿರಾರು ಜನರು ಈ ಪೋಸ್ಟ್​ ಅನ್ನು ಹಂಚಿಕೊಂಡಿದ್ದಾರೆ ಮತ್ತು ಪ್ರತಿಕ್ರಿಯಿಸಿದ್ದಾರೆ. ವಿಕಿಪೀಡಿಯಾ’ದ ವಿಕಾಸ ಮತ್ತು ತಂಡದವರನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ‘I am barbie girl’ ಎಂಬ ಇಂಗ್ಲಿಷ್ ಹಾಡಿನ ಟ್ಯೂನ್​ಗೆ ‘ನಾನು ನಂದಿನಿ ಬೆಂಗಳೂರಿಗೆ ಬಂದೀನಿ’ ಎಂಬ ಸಾಹಿತ್ಯ ರಚಿಸಿ ಹಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.