ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ!

ಕಳೆದ ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರವು ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಮಾಹಿತಿ ಅಧಿಕೃತವಾಗಿ ಪ್ರಕಟಗೊಂಡಿದೆ.

ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ!
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಸ್ಟಿಲ್
Published On :

ಕಳೆದ ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರವು ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಮಾಹಿತಿ ಅಧಿಕೃತವಾಗಿ ಪ್ರಕಟಗೊಂಡಿದೆ.

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ ಚಿತ್ರವು ಸೆಪ್ಟೆಂಬರ್ 22 ರಂದು ತೆಲುಗಿನಲ್ಲಿ 'ಸಪ್ತ ಸಾಗರಾಲು ದಾಟಿ' ಎಂಬ ಶೀರ್ಷಿಕೆಯಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಕ್ಷಿತ್ ಜೊತೆಗೆ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ.

ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಎರಡು ಭಾಗಗಳಲ್ಲಿ ತಯಾರಾಗಿದೆ. ಎರಡನೇ ಭಾಗ ಅಕ್ಟೋಬರ್ 20 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.

Story image

ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು ಮತ್ತು ಸಕಾರಾತ್ಮಕ ಪ್ರತಿಕ್ರಿಯೆ ಪಡೆಯಿತು. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾಗೆ ಗುಂಡು ಶೆಟ್ಟಿ ಸಹ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ, ಸುನಿಲ್ ಎಸ್ ಭಾರದ್ವಾಜ್ ಮತ್ತು ನಿರ್ದೇಶಕ ಹೇಮಂತ್ ಎಂ ರಾವ್ ಅವರ ಸಂಕಲನ ಮತ್ತು ಚರಣ್ ರಾಜ್ ಅವರ ಸಂಗೀತವನ್ನು ಒಳಗೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.