ತಮಿಳು ಚಿತ್ರರಂಗದ ಪ್ರಸಿದ್ಧ ಸಂಗೀತ ಸಂಯೋಜಕ-ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ!
ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಇಂದು (ಸೆಪ್ಟಂಬರ್ 19) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತು.

ಚೆನ್ನೈ: ಸಂಗೀತ ಸಂಯೋಜಕ, ನಟ ಮತ್ತು ನಿರ್ಮಾಪಕ ವಿಜಯ್ ಆಂಟೋನಿ ಅವರ ಪುತ್ರಿ ಮೀರಾ ಇಂದು (ಸೆಪ್ಟಂಬರ್ 19) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 16 ವರ್ಷ ವಯಸ್ಸಾಗಿತ್ತು.
ವರದಿಗಳ ಪ್ರಕಾರ, ಮೀರಾ ಚೆನ್ನೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದ ನಂತರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಕೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಮೀರಾ ಒತ್ತಡದಲ್ಲಿದ್ದರು ಮತ್ತು ಅದಕ್ಕಾಗಿಯೇ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ವಿಜಯ್ ಆಂಟೋನಿ ಅವರು ತಮ್ಮ ನಟನೆಯ ಮುಂಬರುವ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಅವರ ಮುಂಬರುವ ಚಿತ್ರ 'ರಥಂ' ಬಿಡುಗಡೆಗೆ ಸಜ್ಜಾಗಿದೆ. ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆಸಿಕೊಟ್ಟಿದ್ದ ಸಂಗೀತ ಕಾರ್ಯಕ್ರಮ ದೊಡ್ಡ ಹಿಟ್ ಆಗಿತ್ತು.
ವಿಜಯ್ ಆಂಟೋನಿ ಅವರ ಮಗಳು ಮೀರಾ ಅವರು ಚೆನ್ನೈನ ಅಲ್ವಾರ್‌ಪೇಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಕೆ ಚೆನ್ನೈನ ಜನಪ್ರಿಯ ಶಾಲೆಯೊಂದರಲ್ಲಿ ಓದುತ್ತಿದ್ದರು. ವರದಿಗಳ ಪ್ರಕಾರ, ಬಾಲಕಿ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ.
ಮೀರಾ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಕಂಡ ಮನೆಯ ಸಹಾಯಕರು ಆಕೆಯನ್ನು ಚೆನ್ನೈನ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಸದ್ಯ ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ವಿಜಯ್ ಆಂಟೋನಿ ಜನಪ್ರಿಯ ಸಂಗೀತ ಸಂಯೋಜಕರಾಗಿದ್ದು, ಪ್ರಧಾನವಾಗಿ ತಮಿಳು ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವಾರು ವರ್ಷಗಳ ಕಾಲ ಸಂಗೀತ ಸಂಯೋಜಕರಾಗಿದ್ದ ಅವರು ನಿರ್ಮಾಪಕ, ನಟ, ಗೀತರಚನೆಕಾರ, ಸಂಪಾದಕ, ಆಡಿಯೊ ಎಂಜಿನಿಯರ್ ಮತ್ತು ನಿರ್ದೇಶಕರೂ ಆದರು.
ಅವರು ಫಾತಿಮಾ ಎಂಬುವವರನ್ನು ವಿವಾಹವಾದರು. ಫಾತಿಮಾ ಅವರು ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯನ್ನು ನೋಡಿಕೊಳ್ಳುತ್ತಿದ್ದಾರೆ. ವಿಜಯ್ ಮತ್ತು ಫಾತಿಮಾ ದಂಪತಿಗೆ ಮೀರಾ ಮತ್ತು ಲಾರಾ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


